ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಶಾಸಕರಾದ ಮುನಿರತ್ನ ಅವರಿಂದ ಒಕ್ಕಲಿಗರ ಜಾತಿ ನಿಂದನೆ, ಜೀವ ಬೆದರಿಕೆ ಹಾಗೂ ಕುಟುಂಬ ಸದಸ್ಯರ ಬಗ್ಗೆ ಹೀನ ಮಾತುಗಳಿಂದ ನೊಂದಿರುವ ಬಿಬಿಎಂಪಿ ಗುತ್ತಿಗೆದಾರರಾದ ಚಲುವರಾಜು ಅವರ ಮನೆಗೆ ಭೇಟಿ ನೀಡಿ ನೊಂದಿರುವ ಅವರ ಕುಟುಂಬಕ್ಕೆ ಧೈರ್ಯ ತುಂಬಿ, ಸಂಘದ ವತಿಯಿಂದ ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸುವ ಭರವಸೆ ನೀಡಿದರು
ಇದೆ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಶ್ರೀ ಸಿ ಎನ್ ಬಾಲಕೃಷ್ಣ ರವರು ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಆರ್ ಪ್ರಕಾಶ್ ಹಾಗೂ ಖಜಾಂಚಿ ಶ್ರೀ ಉಮಾಪತಿ ಶ್ರೀನಿವಾಸ ಗೌಡ ರವರು ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮುಖಂಡರಾದ ಶ್ರೀ ಗಿರೀಶ್ ಗೌಡ್ರು ರವರು ಉಪಸ್ಥಿತರಿದ್ದರು