ಹಾಸನ : ಐತಿಹಾಸಿಕ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು(ಮಾ.23) ಮುಂಜಾನೆ ಮಂಡ್ಯ ಜಿಲ್ಲೆಯ ಬೆಳ್ಳರೂ ಕ್ರಾಸ್ನ ಆದಿಚುಂಚನಗಿರಿ ಆಸ್ಪತ್ರೆಯಲ್ಕಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲ ತಿಂಗಳಿಂದ ಸ್ವಾಮೀಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ದಿಡೀರ್ ಅರೋಗ್ಯ ಸ್ಥಿತಿಯಲ್ಲಿ ಏರು ಪೇರು ಆಗಿದ್ದು, ಕೂಡಲೆ ಶ್ರವಣಬೆಳಗೊಳದ ಜೈನ ಮಠಕ್ಕೆ ವೈದ್ಯರು ಆಗಮಿಸಿ ಪರೀಕ್ಷೆ ನಡೆಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ಕಾರಣಕ್ಕೆ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನ ಸ್ಥಳಾಂತರ ಮಾಡಲಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.