2024ರಲ್ಲಿ ವಿಶ್ವಾದ್ಯಂತದ ಟಾಪ್ 2% ವಿಜ್ಞಾನಿಗಳ ಪ್ರತಿಷ್ಠಿತ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದ ಎಂಟು ಪ್ರಾಧ್ಯಾಪಕರು ಸ್ಥಾನ ಪಡೆದುಕೊಂಡಿದ್ದಾರೆ.
ಯುಎಸ್ಎ, ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಮತ್ತು ನೆದರ್ಲ್ಯಾಂಡ್ನ ಎಲ್ಸೆವಿಯರ್ ಪಬ್ಲಿಷಿಂಗ್ನಿಂದ ವಾರ್ಷಿಕವಾಗಿ ಸೂಚ್ಯಂಕಗಳನ್ನು ಸಂಕಲಿಸಿ ಅದರ ಆಧಾರದ ಮೇಲೆ ಪ್ರಾಧ್ಯಾಪಕರನ್ನು ಗುರುತಿಸಲಾಗಿದೆ.
ಬೆಂಗಳೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ, ಭೌತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ ಮತ್ತು ಗಣಿತ ವಿಭಾಗಗಳಿಗೆ ಸೇರಿದ ಪ್ರಾಧ್ಯಾಪಕರುಗಳನ್ನು ಗುರುತಿಸಿ ಗೌರವಿಸಲಾಗಿದೆ. ಚಂದ್ರಶೇಖರಯ್ಯ ಡಿ.ಎಸ್, ದೇವಿ ಎಲ್.ಗೋಮತಿ, ರುದ್ರಯ್ಯ ಎನ್, ಶಿವಕುಮಾರ್, ಸಿ.ಶ್ರೀನಿವಾಸ್, ಕುಂಬಿನರಸಯ್ಯ ಎಸ್, ಈರಯ್ಯ ಬಿ, ಮತ್ತು ವಿಷ್ಣು ಕಾಮತ್ ಅವರು ಸ್ಥಾನ ಪಡೆದಿದ್ದಾರೆ.
ವಿಶ್ವವಿದ್ಯಾನಿಲಯಗಳ ಪೈಕಿ ಬೆಂಗಳೂರು ವಿಶ್ವವಿದ್ಯಾನಿಲಯ ರಾಜ್ಯದ ವಿಶ್ವವಿದ್ಯಾನಿಲಯಗಳಿಂದ ಹೆಚ್ಚಿನ ಸಂಖ್ಯೆಯ ಪ್ರಾಧ್ಯಾಪಕರನ್ನು ಹೊಂದಿದ್ದು, ಮತ್ತೊಮ್ಮೆ ಅಂತಾರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಿದೆ.