ಬೆಂಗಳೂರು:- ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ ಆಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಭಾನುವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.