ಕೀವ್: ಕೀವ್ನ ಶಾಲೆಯೊಂದಕ್ಕೆ ರಷ್ಯಾದ ಡ್ರೋನ್ ಅಪ್ಪಳಿಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.
ಕೀವ್ ಮೇಲೆ ರಷ್ಯಾ ಮಂಗಳವಾರ ರಾತ್ರಿಯಿಡೀ ದಾಳಿ ನಡೆಸಿದ್ದು, ಈ ವೇಳೆ ಶಾಲೆಗೆ ಡ್ರೋನ್ ಅಪ್ಪಳಿಸಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಇನ್ನೂ ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ರಾಜ್ಯ ತುರ್ತು ಸೇವಾ ಘಟಕ ತಿಳಿಸಿದೆ.
ಡ್ರೋನ್ ದಾಳಿಯಲ್ಲಿ ವಿದ್ಯಾರ್ಥಿಗಳಿದ್ದ ಎರಡು ಅಂತಸ್ತಿನ ಕಟ್ಟಡ ಹಾಗೂ ಅಧ್ಯಯನದ ಕಟ್ಟಡವೂ ಸಹ ನೆಲಸಮಗೊಂಡಿದ್ದು, ಡ್ರೋನ್ ಅಪ್ಪಳಿಸಿದಾಗ ಶಾಲೆಯ 300 ಚದರ ಮೀಟರ್ವರೆಗೂ ಬೆಂಕಿ ಆವರಿಸಿತು. ಸ್ಥಳೀಯರು ಬೆಂಕಿ ನಂದಿಸುವ ಕಾರ್ಯದಲ್ಲೂ ತೊಡಗಿಕೊಂಡಿದ್ದಾರೆ.
ರಷ್ಯಾ ನಿಯಮಿತವಾಗಿ ಉಕ್ರೇನ್ ವಿರುದ್ಧ ಕ್ಷಿಪಣಿ, ಫಿರಂಗಿಗಳು ಮತ್ತು ಡ್ರೋನ್ಗಳಿಂದ ದಾಳಿ ಮಾಡುತ್ತಿದೆ. ಇದರಿಂದ ಜನತೆ ವಿದ್ಯುತ್ ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಪರದಾಡುವಂತಾಗಿದೆ.