ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ಭಾಗಿಯಾಗಲು ಅಮೆರಿಕಕ್ಕೆ ತೆರಳಿದ್ದ ಪ್ರಧಾನಿ ಮೋದಿ ನ್ಯೂಯಾರ್ಕ್ನಲ್ಲಿ ನೇಪಾಳದ ಪ್ರಧಾನಿ ಕೆ ಪಿ ಶರ್ಮಾ ಒಲಿ ಮತ್ತು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಸೇರಿದಂತೆ ವಿಶ್ವ ನಾಯಕರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷೀಯ ಒಲಿ ಹಾಗೂ ಮಹಮೂದ್ ಅಬ್ಬಾಸ್ ಅವರೊಂದಿಗೆ ಬಾಂಧವ್ಯದ ವಿವಿಧ ಅಂಶಗಳನ್ನು ಚರ್ಚಿಸಿದ್ದಾರೆ. ಪ್ಯಾಲೆಸ್ತೀನ್ ಜನರಿಗೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಛರಿಸಿದರು.
ಮೂರು ದಿನಗಳ ಅಮೇರಿಕಾ ಪ್ರವಾಸದ ಎರಡನೇ ದಿನ ಪ್ರಧಾನಿ ಮೋದಿಯವರು ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನೇಪಥ್ಯದಲ್ಲಿ ಹಲವು ನಾಯಕರನ್ನು ಭೇಟಿ ಮಾಡಿದರು.
ನ್ಯೂಯಾರ್ಕ್ನಲ್ಲಿ ಪ್ರಧಾನ ಮಂತ್ರಿ ಕೆಪಿ ಓಲಿ ಅವರೊಂದಿಗೆ ಫಲಪ್ರದ ಮಾತುಕತೆ ನಡೆದಿದೆ. ಭಾರತ-ನೇಪಾಳ ಸ್ನೇಹವು ತುಂಬಾ ದೃಢವಾಗಿದೆ. ನಮ್ಮ ಸಂಬಂಧಗಳಿಗೆ ಇನ್ನಷ್ಟು ವೇಗ ಹೆಚ್ಚಿಸಲು ನಾವು ಎದುರು ನೋಡುತ್ತಿದ್ದೇವೆ. ನಮ್ಮ ಮಾತುಕತೆಗಳು ಇಂಧನ, ತಂತ್ರಜ್ಞಾನ ಮತ್ತು ವ್ಯಾಪಾರದಂತಹ ವಿಷಯಗಳ ಮೇಲೆ ಕೇಂದ್ರೀಕೃತವಾಗಿವೆ ಎಂದು ಹೇಳಿದರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 79 ನೇ ಅಧಿವೇಶನದಲ್ಲಿ ಪಾಲ್ಗೊಳ್ಳಲು ಒಲಿ ಅವರು ತಮ್ಮ ಮೊದಲ ವಿದೇಶಿ ಭೇಟಿಯಲ್ಲಿ ಅಮೆರಿಕಾದಲ್ಲಿದೆ. ಪ್ಯಾಲೆಸ್ತೀನ್ ಅಧ್ಯಕ್ಷ ಅಬ್ಬಾಸ್ ಅವರನ್ನು ಭೇಟಿ ಮಾಡಿದ ಮೋದಿ ಪ್ಯಾಲೆಸ್ತೀನ್ ಜನತೆಗೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು.
ಮೋದಿ ಕುವೈತ್ನ ಯುವರಾಜ ಶೇಖ್ ಸಬಾಹ್ ಖಾಲಿದ್ ಅಲ್ ಸಬಾಹ್ ಅವರನ್ನು ಭೇಟಿ ಮಾಡಿದರು. ಎರಡೂ ದೇಶಗಳ ಐತಿಹಾಸಿಕ ಸಂಬಂಧಗಳು ಮತ್ತು ಜನರಿಂದ ಜನರ ಸಂಪರ್ಕಗಳನ್ನು ಗಾಢಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಿದರು.