ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದ್ದಾರೆ
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈ ದೇಶದ ಕಾನೂನು ಎಷ್ಟು ಗಟ್ಟಿಯಾಗಿದೆ ಅನೋದು ಕೋರ್ಟ್ ಇಂದಿನ ಆದೇಶದಿಂದ ಖಾತ್ರಿಯಾಗಿದೆ.
ಉಪ್ಪು ತಿಂದವರು ನೀರು ಕುಡಿಯಲೇಬೇಕು ಅನ್ನೋದು ಸಹ ಇದರಿಂದ ಜನ ಅರ್ಥಮಾಡಿ ಕೊಂಡಿದ್ದಾರೆ. ಈ ದೇಶದ ಕಾನೂನನ್ನು ಧಿಕ್ಕರಿಸಿ ಮಾಡುವ ಯಾವುದೇ ಪ್ರಯತ್ನಗಳು ಸಹ ಸಾಂದರ್ಭಿಕವಾಗಿ ತತಕ್ಷಣಕ್ಕೆ ಅವರಿಗೆ ಒಳ್ಳೆಯದಾಗಬಹುದು. ಆದ್ರೆ ದೀರ್ಘಕಾಲವಾಗಿ ಇರಲ್ಲ. ಕಾನೂನನ್ನು ಮುರಿಯುವವರಿಗೆ, ವಿರೋಧಿಸುವವರಿಗೆ ನ್ಯಾಯ ಸಿಗ್ಲಲ ಅನ್ನೋದನ್ನ ಹೈಕೋರ್ಟ್ ಆದೇಶ ಎತ್ತಿಹಿಡಿದಿದೆ ಎಂದು ಹೇಳಿದರು.