ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ. ಈ ಬಾರಿ 21 ದಿನಗಳ ಕಾಲ ದಸರಾ ವಿದ್ಯುತ್ ದೀಪಾಲಂಕಾರ ಆಯೋಜನೆ ಮಾಡಲಾಗುತ್ತಿದೆ.
ಮೈಸೂರಿನ ಹಲವು ವೃತ್ತಗಳಲ್ಲಿ ಪ್ರಜಾಪ್ರಭುತ್ವ ಸಾಗಿ ಬಂದ ಹಾದಿ, ತಾಯಿ ಭುವನೇಶ್ವರಿ, ಸೋಮನಾಥೆಶ್ವರ ದೇವಾಲಯ, ಸಂವಿಧಾನ ಪ್ರಸ್ತಾವನೆ, ಮೈಸೂರಿನ ಅರಸರಾದ ಮುಮ್ಮಡಿ ಕೃಷ್ಣರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಣಿ ಕೆಂಪನಂಜಮ್ಮಣಿ, ಜಯಚಾಮರಾಜೇಂದ್ರ ಒಡೆಯರ್, ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಪ್ರತಿಕೃತಿಗಳ ನಿರ್ಮಾಣ ಮಾಡಲಾಗಿದೆ.
ಕಾರ್ಡ್ ಹಾಗೂ ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ
ಎಲ್ಲರಿಗೂ ಸಿಗಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 5 ದಿನಗಳ ಕಾಲ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 26 ರಿಂದ 30 ರವರೆಗೂ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿನಿತ್ಯ 1000 ದಿಂದ 1500 ಗೋಲ್ಡ್ ಕಾರ್ಡ್ ಗಳು ಮಾರಾಟವಾಗಲಿದೆ. ಒಂದು ದಸರಾ ಗೋಲ್ಡ್ ಕಾರ್ಡ್ ಗೆ 6500 ರೂಪಾಯಿ ನಿಗದಿಗೊಳಿಸಲಾಗಿದೆ.
ಒಂದು ದಸರಾ ಗೋಲ್ಡ್ ಕಾರ್ಡ್ನಲ್ಲಿ ಒಬ್ಬರು ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು, ಚಾಮುಂಡಿಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಅರಮನೆ ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಟಿಕೆಟ್ ದರ 3500 ರೂಪಾಯಿ ನಿಗದಿ ಮಾಡಲಾಗಿದೆ. ಪಂಜಿನ ಕವಾಯತು ವೀಕ್ಷಣೆಗೆ ಟಿಕೆಟ್ ದರ 1000 ರೂಪಾಯಿ ನಿಗದಿಗೊಳಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹಾದೇವಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ.
ಈ ಬಾರಿ ಎಂಟು ದಿನಗಳ ಕಾಲ ಯುವ ಸಂಭ್ರಮ ಆಯೋಜನೆ
ಮಾನಸಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಯುವ ಸಂಭ್ರಮ ಅನಾವರಣಗೊಳ್ಳಲಿದೆ. ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 1 ರವರೆಗೆ ನಡೆಯುವ ಯುವ ಸಂಭ್ರಮ ನಡೆಯಲಿದೆ. ಸೆಪ್ಟೆಂಬರ್ 24 ರಂದು ಸ್ಯಾಂಡಲ್ ವುಡ್ ನ ಖ್ಯಾತ ನಟ ನಟಿಯರಾದ ಶ್ರೀಮುರುಳಿ ಮತ್ತು ರುಕ್ಮಿಣಿ ವಸಂತ್ ಯುವ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ದಸರಾ ಮುಗಿದ ಬಳಿಕವೂ ಹತ್ತು ದಿನ ವಿದ್ಯುತ್ ದೀಪಾಲಂಕಾರ ವಿಸ್ತರಣೆ ಮಾಡಲಾಗುತ್ತದೆ.
ಮೈಸೂರು ನಗರದ ಸುತ್ತಮುತ್ತ 130 ಕಿ ಮೀ ವಿದ್ಯುತ್ ದೀಪಾಲಂಕಾರಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ವಿದ್ಯುತ್ ರಥ ಸ್ಥಬ್ದಚಿತ್ರ ಸಾಗಲಿದೆ. ಅಕ್ಟೊಬರ್ 6, 7, 11, 12 ರಂದು ಡ್ರೋನ್ ಶೋ ಆಯೋಜನೆ ಮಾಡಲಾಗಿದೆ. ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 4 ದಿನಗಳ ಕಾಲ ಡ್ರೋನ್ ಶೋ ಆಯೋಜನೆ ಮಾಡಲಾಗಿದೆ.
ಮೈಸೂರಿನ ಹಲವು ವೃತ್ತಗಳಲ್ಲಿ ಪ್ರಜಾಪ್ರಭುತ್ವ ಸಾಗಿ ಬಂದ ಹಾದಿ, ತಾಯಿ ಭುವನೇಶ್ವರಿ, ಸೋಮನಾಥೆಶ್ವರ ದೇವಾಲಯ, ಸಂವಿಧಾನ ಪ್ರಸ್ತಾವನೆ, ಮೈಸೂರಿನ ಅರಸರಾದ ಮುಮ್ಮಡಿ ಕೃಷ್ಣರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಣಿ ಕೆಂಪನಂಜಮ್ಮಣಿ, ಜಯಚಾಮರಾಜೇಂದ್ರ ಒಡೆಯರ್, ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಪ್ರತಿಕೃತಿಗಳ ನಿರ್ಮಾಣ ಮಾಡಲಾಗಿದೆ.