ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಹಗರಣ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ಕೋರ್ಟ್ನಲ್ಲೂ ಸಹ ಸಿಎಂ ಸಿದ್ದರಾಮಯ್ಯಗೆ ಹಿನ್ನೆಡೆಯಾಗಿದೆ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ.
ಇನ್ನೂ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದೇ ಎಫ್ಐಆರ್ ದಾಖಲಾಗಬೇಕು. ವೆಬ್ಸೈಟ್ನಲ್ಲಿನ ಆದೇಶ ಪ್ರತಿಯಿಂದಲೇ ಎಫ್ಐಆರ್ ಮಾಡಿಕೊಳ್ಳಬಹುದು.
ಇವತ್ತೇ ಎಫ್ಐಆರ್ ದಾಖಲಾಗುತ್ತದೆ ಎಂದು ದೂರುದಾರ ಸ್ನೇಹಮಹಿ ಕೃಷ್ಣ ಮೈಸೂರಿನಲ್ಲಿ ಹೇಳಿದ್ದಾರೆ. ನಮಗೆ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ಹೀಗಾಗಿ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ಕೊಡಿ ಎಂದು ಹೈಕೋರ್ಟ್ಗೆ ಇವತ್ತು ಅಥವಾ ನಾಳೆ ಅರ್ಜಿ ಸಲ್ಲಿಸುತ್ತೇವೆ ಎಂದಿದ್ದಾರೆ. ಸಿಎಂ ಮೇಲಿನ ಮುಡಾ ಕೇಸ್ನಲ್ಲಿ ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ. ಹೀಗಾಗಿ, ವಿಚಾರಣೆ ಸಿಬಿಐಗೆ ಕೊಡಿ ಎಂದು ಹೈಕೋರ್ಟ್ಗೆ ಅರ್ಜಿ ಹಾಕುವುದಾಗಿ ತಿಳಿಸಿದ್ದಾರೆ