ಬಾಗಲಕೋಟೆ: ಸಿಎಂ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ವಿರುದ್ಧಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು.
ಕೇಂದ್ರ ಬಿಜೆಪಿ, ರಾಜ್ಯ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಅಧ್ಯಕ್ಷ ಎಸ್ ಜಿ ನಂಜಯ್ಯನಮಠ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.