ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಅವರ ಬೆಂಗಳೂರಿನ ಕಾವೇರಿ ನಿವಾಸಕ್ಕೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಬೆಳಿಗ್ಗಿನ ಉಪಹಾರ ಸೇವಿಸಿ, ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ಉಪಾಹಾರದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೂ ಕೂಡಾ ಜತೆಗೂಡಿದ್ದಾರೆ.
ಮಾಜಿ ಮುಖ್ಯಮಂತ್ರಿಯಾಗಿದ್ದರೂ ರಾಜ್ಯ ರಾಜಕೀಯದಲ್ಲಿ ಈಗಲೂ ಯಡಿಯೂರಪ್ಪ ಅವರಿಗಿರುವ ತಾಕತ್ತು ಬಿಜೆಪಿಯಲ್ಲಿ ಬೇರೆ ಯಾರಿಗೂ ಇಲ್ಲ ಎನ್ನುವುದನ್ನು ಪಕ್ಷ ಅರಿತುಕೊಂಡಂತಿದೆ. ಅಧಿಕಾರವೇ ಇಲ್ಲದಿದ್ದರೂ ಅವರು ನಡೆಸುತ್ತಿರುವ ಓಡಾಟ, ನಾನಾ ಕಾರಣಗಳಿಗಾಗಿ ಪಕ್ಷ ಬಿಟ್ಟು ಹೋಗುವ ಹಂತದಲ್ಲಿರುವವರನ್ನು ಸಮಾಧಾನಪಡಿಸು