ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಗೆ ಇದೇ ತಿಂಗಳ ಮಾರ್ಚ್ 25ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ನಂದಿಗಿರಿಧಾಮಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ..
ಮಾರ್ಚ್ 24 ರಂದು ಬೆಳಿಗ್ಗೆ 10 ಗಂಟೆಯಿಂದ ಮಾರ್ಚ್ 25 ಮಧ್ಯಾಹ್ನ 2 ಗಂಟೆಯ ವರೆಗೂ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್ಎಂ ನಾಗರಾಜ್ ಗುರುವಾರ ಆದೇಶ ಹೊರಡಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು,
ಎಸ್ಪಿಜಿ ಅಧಿಕಾರಿಗಳು ಹಾಗೂ ಪ್ರಧಾನಿಯವರ ಭದ್ರತಾ ಸಿಬ್ಬಂದಿ ಈಗಾಗಲೇ ನಂದಿಗಿರಿಧಾಮದ ಅತಿಥಿ ಗೃಹದಲ್ಲಿ ತಂಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಧಿಕಾರಿಗಳ ತುರ್ತು ಸಂಚಾರಕ್ಕೆ ಅನುಕೂಲ ಕಲ್ಪಿಸಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ ಎಂದು ತಿಳಿದು ಬಂದಿದೆ. ಪಿಡಬ್ಲ್ಯೂಡಿ ಅಧಿಕಾರಿಗಳ ನಂದಿಗಿರಿಧಾಮದ ರಸ್ತೆ ದುರಸ್ತಿ ಕಾರಣ ಒಡ್ಡಿದ ಕಾರಣ.. ಕುಂಟು ನೆಪ ಮುಂದಿಟ್ಟುಕೊಂಡು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ.