ನವದೆಹಲಿ: ಭಾರತ ಮೂಲದ ಉದ್ಯಮಿ, ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಾಂಗಾ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಭಾರತ ಪ್ರವಾಸದ ವೇಳೆ ನಿಗದಿಯಾಗಿದ್ದ ಅವರ ಸಭೆಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.
ಅಜಯ್ ಬಾಂಗಾ ಅವರು ಕ್ವಾರಂಟೈನ್ನಲ್ಲಿರುವ ಕಾರಣ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ನಡೆಯಬೇಕಿದ್ದ ಸಭೆ ರದ್ದಾಗಿದೆ ಎಂದು ವಿತ್ತ ಸಚಿವಾಲಯ ಮಾಹಿತಿ ನೀಡಿದೆ.
ಮಾರ್ಚ್ 23, 24 ರಂದು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೇರಿದಂತೆ ಉನ್ನತ ಅಧಿಕಾರಿಗಳೊಂದಿಗೆ ಅಜಯ್ ಬಂಗಾ ಸಭೆ ನಡೆಸಬೇಕಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ದೆಹಲಿಗೆ ಬಂದಿಳಿದ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಪರೀಕ್ಷೆಯಲ್ಲಿ ಅಜಯ್ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಅವರಿಗೆ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಂಡಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಅವರು ಕ್ವಾರಂಟೈನ್ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫೆ.23ರಂದು ಅಜಯ್ ಬಾಂಗಾ ಅವರನ್ನು ವಿಶ್ವ ಬ್ಯಾಂಕ್ನ ಅಧ್ಯಕ್ಷ ಸ್ಥಾನಕ್ಕೆ ಅಮೆರಿಕವು ನಾಮನಿರ್ದೇಶನ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ತಿಳಿಸಿದ್ದರು.