ಬೆಂಗಳೂರು: ಪೊಲೀಸ್ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹೊಸ ಛಾಪು ಮೂಡಿಸಿದ್ದ ಬೆಂಗಳೂರಿನ ಪೊಲೀಸ್ ಕಾನ್ಸ್ಟೇಬಲ್ ಎಚ್.ಎಂ ಲೋಕೇಶ್ ಇದೀಗ ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಯ ಭದ್ರತಾ ಸಿಬ್ಬಂದಿಯಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಸೋಷಿಯಲ್ ಮೀಡಿಯಾ ವಿಭಾಗದಲ್ಲಿ ಲೋಕೇಶ್ ಕೆಲಸ ಮಾಡುತ್ತಿದ್ದರು. ಸಂವಹನ, ಇಂಗ್ಲೀಷ್ ಹಾಗೂ ಕಂಪ್ಯೂಟರ್ ಕೌಶಲ್ಯ ಹೊಂದಿದ್ದ ಲೋಕೇಶ್ ಕೊರೊನಾ ಸಂದರ್ಭದಲ್ಲಿ ನಾಗರಿಕರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಜನರ ಸಂದೇಹಗಳಿಗೆ ಉತ್ತರಿಸಿ ಧೈರ್ಯ ತುಂಬುವ ಕೆಲಸ ಮಾಡಿದ್ದರು.
ಪೊಲೀಸ್ ಆಯುಕ್ತರಾದ ಪ್ರವೀಣ್ ಸೂದ್, ಮೇಘರಿಕ್, ಸುನೀಲ್ ಕುಮಾರ್, ಭಾಸ್ಕರ್ ರಾವ್, ಕಮಲ್ ಪಂತ್ ಮತ್ತು ಪ್ರತಾಪ್ ರೆಡ್ಡಿ ಅವಧಿಯಲ್ಲಿ ಕೆಲಸ ನಿರ್ವಹಿಸಿದ್ದ ಲೋಕೇಶ, ಭಾರತೀಯ ರಾಯಭಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಹುದ್ದೆಗಾಗಿ ವಿವಿಧ ಹಂತಗಳಲ್ಲಿ ಸಂದರ್ಶನ ಎದುರಿಸಿದ್ದರು. ಇದೀಗ ಎಲ್ಲಾ ಹಂತದ ಸಂದರ್ಶನದಲ್ಲೂಅ ತ್ಯುತ್ತಮ ಸಾರರ್ಥ ತೋರಿರುವ ಲೋಕೇಶ್ ಇದೀಗ ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಯ ಭದ್ರತಾ ಸಿಬ್ಬಂದಿಯಾಗಿ ಆಯ್ಕೆಯಾಗಿದ್ದಾರೆ.