ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ಈಗ ಮತ್ತೊಂದು ಹಂತಕ್ಕೆ ಹೋಗಿದೆ. ಕೇಂದ್ರ ಸಚಿವರನ್ನು ನಿಂದಿಸಿದ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೆಡಿಎಸ್ ಹಿರಿಯ ನಾಯಕ,
ವಿಧಾನಪರಿಷತ್ ಜೆಡಿಎಸ್ ಉಪನಾಯಕ ಟಿ.
ಎ.ಶರವಣ ನೇತೃತ್ವದಲ್ಲಿ ರಾಜ್ಯ ಪೊಲೀಸ್ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿ ಜೆಡಿಎಸ್ ಪಕ್ಷದ ವತಿಯಿಂದ ಮನವಿ ಸಲ್ಲಿಸಲಾಯಿತು.
ಕುಮಾರಸ್ವಾಮಿ ವಿರುದ್ಧ ಪತ್ರದ ಮೂಲಕ ಹಂದಿಗೆ ಹೋಲಿಸಿ, ಚಂದ್ರಶೇಖರ್ ಟೀಕಿಸಿದ್ದಾರೆ. ಇದರಿಂದ ಕೇಂದ್ರ ಸಚಿವರಿಗೆ ಅಪಮಾನ ಮಾಡಲಾಗಿದೆ ಎಂದು ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಜೆಡಿಎಸ್ ಉಪನಾಯಕ ಟಿ. ಎ.ಶರವಣ ಆಗ್ರಹಿಸಿದ್ದಾರೆ.