ಉತ್ತರ ಪ್ರದೇಶ:- ಉತ್ತರ ಪ್ರದೇಶದ ಅಮೇಥಿಯಲ್ಲಿ ಮನೆಗೆ ನುಗ್ಗಿ ದುಷ್ಕರ್ಮಿಗಳು ಶಿಕ್ಷಕ ದಂಪತಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜರುಗಿದೆ.
ದರೋಡೆ ಮಾಡಿದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಮತ್ತು ಅಪರಾಧದ ಹಿಂದಿನ ಉದ್ದೇಶವು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸುನಿಲ್ಗೆ ಸಂಬಂಧಿಸಿದ ಕಾನೂನು ವಿವಾದ ಸೇರಿದಂತೆ ಎಲ್ಲಾ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಕುಮಾರ್ ಸಿಂಗ್ ಖಚಿತಪಡಿಸಿದ್ದಾರೆ.
ಪೂನಂ ಆಗಸ್ಟ್ 18ರಂದು ಚಂದನ್ ವರ್ಮಾ ಎಂಬಾತನ ವಿರುದ್ಧ ಕಿರುಕುಳ, ಹಲ್ಲೆ ಮತ್ತು ಕೊಲೆ ಬೆದರಿಕೆ ಆರೋಪದಡಿ ದೂರು ದಾಖಲಿಸಿದ್ದರು. ಸ್ಪಿ ಅನೂಪ್ ಸಿಂಗ್ ಪ್ರಕಾರ, ಈ ಹಿಂದೆ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಭರವಸೆ ನೀಡಿದ್ದು, ತಮ್ಮ ಅಧಿಕಾರಿಗಳಿಗೆ ಅಪರಾಧ ನಡೆದ ಸ್ಥಳದಲ್ಲಿ ಇರುವಂತೆ ಸೂಚಿಸಿದ್ದಾರೆ