ಬಾಗಲಕೋಟೆ: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದಲ್ಲಿ ನಿನ್ನೆ ಸಂಜೆ ಎಂಟು ಗಂಟೆಗೆ ಸುಮಾರಿಗೆ ಹುಸೇನಸಾಬ ರಾಇಸಾಬ ಘಡ್ಡೆಕರ ವಯಸ್ಸು (71) ಸಹಜ ಕಾಯಿಲೆಯಿಂದ ಮೃತಪಟ್ಟ ಘಟನೆ ನಡೆದಿದೆ. ಆದರೆ ಮೃತಪಟ್ಟ ವ್ಯಕ್ತಿಯನ್ನು ಅಂತ್ಯ ಸಂಸ್ಕಾರ ಮಾಡಲು ಜಾಗವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ
ಯಲ್ಲಟ್ಟಿ ಗ್ರಾಮದಲ್ಲಿ 50 ಮುಸ್ಲಿಂ ಸಮುದಾಯದ ಮನೆಗಳಿದ್ದು ಇಲ್ಲಿ ಯಾರೇ ಸತ್ತರು ಅಂತ್ಯ ಸಂಸ್ಕಾರ ಮಾಡಲು ಜಾಗವಿಲ್ಲದೆ ಪರದಾಡುವ ಪರಿಸ್ಥಿತಿ ತಪ್ಪಿಲ್ಲಿ.
ಸುಮಾರು ವರ್ಷಗಳಿಂದ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರು ನಮಗೆ ಇಲ್ಲಿವರೆಗೂ ಅಂತ್ಯ ಸಂಸ್ಕಾರ ಮಾಡಲು ಜಾಗ ನೀಡಿಲ್ಲ.
ಅಧಿಕಾರಿಗಳು ಬೇಗನೆ ಎಚ್ಚೆತ್ತುಕೊಂಡು ಮುಸ್ಲಿಂ ಸಮುದಾಯದವರಿಗೆ ಅಂತ್ಯ ಸಂಸ್ಕಾರ ಮಾಡಲು ಜಾಗ ನೀಡದಿದ್ದರೆ ನಾವು ಪ್ರತಿಪಟಿಸುತ್ತೇವೆ ಎಂದು ಎಚ್ಚರಿಕೆ ನೀಡುವ ಅಷ್ಟರಲ್ಲಿ
ಸ್ಥಳಕ್ಕೆ ದೌಡಾಯಿಸಿದ ಕಂದಾಯ ಅಧಿಕಾರಿಗಳು ಮತ್ತು ತಹಶೀಲ್ದಾರ್ ಅವರ ಸಮಸ್ಯೆಗಳನ್ನು ಆಲಿಸಿ, ನೀವು ಶಾಂತ ರೀತಿಯಿಂದ ಬನಹಟ್ಟಿಯಲ್ಲಿ ಅಂತ್ಯ ಸಂಸ್ಕಾರ ಮಾಡಿ
ತಹಸಿಲ್ದಾರ ಮಾರ್ಗದರ್ಶನದಲ್ಲಿ ಕಂದಾಯ ನಿರೀಕ್ಷಕರಾದ ಮಠಪತಿ ಮತ್ತು ಯಲ್ಲಟ್ಟಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಗಳು ಆಲಿಸಿದರು ಮೇಲಧಿಕಾರಿಗಳ ಜೊತೆ ಮಾತನಾಡಿ 15ರಿಂದ 20 ದಿನದ ಒಳಗಾಗಿ ನಿಮಗೆ ಸೂಕ್ತ ಪರಿಹಾರ ಕೊಡಿಸುತ್ತೇನೆ ಎಂದು ಭರವಸೆ ಭರವಸೆ ನೀಡಿದರು.
ನಂತರ ಅದಕ್ಕೆ ಒಪ್ಪಿದ ಗಡ್ಡೆಕರ್ ಕುಟುಂಬಸ್ಥರು ಮತ್ತು ಹಿರಿಯರು ಬನಹಟ್ಟಿಯಲ್ಲಿ ಅಂತ್ಯಸಂಸ್ಕಾರ ಮಾಡಿದರು.