ಸುಮಾರು 9 ವರ್ಷಗಳ ಬಳಿಕ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದಾರೆ. ಜೈ ಅವರಿಗೆ ನಮ್ಮ ಪಕ್ಷದ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಆಹ್ವಾನ ನೀಡಿದ್ದಾರೆ. ಜೈಶಂಕರ್ ಅವರು ಅಕ್ಟೋಬರ್ 15 ಮತ್ತು 16 ರಂದು ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಎಸ್ಸಿಒ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈ ಸಮಯಲ್ಲಿ ನಮ್ಮ ಜತೆಗೆ ನೀವು ನಿಲ್ಲಬೇಕು, ಪಾಕಿಸ್ತಾನ ಪ್ರಜಾಪ್ರಭುತ್ವದ ಬಗ್ಗೆ ವಿಶ್ವ ನಾಯಕರಿಗೆ ತಿಳಿಸುವ ಅಗತ್ಯ ಇದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಪಾಕ್ನಲ್ಲಿ ತಮ್ಮ ಪಕ್ಷದ ಪರವಾಗಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಭಾರತದ ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರಿಗೆ ಆಹ್ವಾನ ನೀಡಿದ್ದಾರೆ, ಜೈಶಂಕರ್ ಅವರು ಅಕ್ಟೋಬರ್ 15 ಮತ್ತು 16 ರಂದು ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಎಸ್ಸಿಒ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ತಮ್ಮ ಹೋರಾಟದಲ್ಲಿ ಭಾಗವಹಿಸುವಂತೆ ಹಾಗೂ ಭಾಷಣ ಮಾಡುವಂತೆ ಆಹ್ವಾನ ನೀಡಿದ್ದಾರೆ. ಈ ಮೂಲಕ ತಮ್ಮ ಪಕ್ಷದ ಪ್ರತಿಭಟನೆಗೆ ಭಾರತದ ಸಹಾಯ ಕೇಳಿದ್ದಾರೆ.
ಪಾಕಿಸ್ತಾನದ ಖೈಬರ್ ಪಖ್ತೂಂಖ್ವಾ ಪ್ರಾಂತೀಯ ಮಾಹಿತಿ ಸಲಹೆಗಾರ ಬ್ಯಾರಿಸ್ಟರ್ ಅಲಿ ಸೈಫ್ ಅವರು ‘ಪಾಕಿಸ್ತಾನದ ರಾಜ್ಯವನ್ನು ಬಲಪಡಿಸಲು’ ಪಿಟಿಐನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಭಾರತವನ್ನು ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರತಿಭಟನೆಯಲ್ಲಿ ಭಾಗವಹಿಸಲು ಮತ್ತು ಪಕ್ಷದ ಕಾರ್ಯಕರ್ತರು ಮತ್ತು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲು ಭಾರತೀಯ ವಿದೇಶಾಂಗ ಸಚಿವರನ್ನು ಆಹ್ವಾನಿಸಿದೆ ಎಂದು ವರದಿಯಾಗಿದೆ..
ಜೈಶಂಕರ್ ಅವರು ನಮ್ಮ ಜತೆಗೆ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ನಮ್ಮ ಜನರೊಂದಿಗೆ ಮಾತನಾಡಬೇಕು, ಪಾಕಿಸ್ತಾನವು ಪ್ರಬಲ ಪ್ರಜಾಪ್ರಭುತ್ವವಾಗಿದ್ದು, ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ ಎಂದು ಅಲಿ ಸೈಫ್ ಹೇಳಿದರು. ವಿಶ್ವ ನಾಯಕರು ಪಾಕಿಸ್ತಾನಕ್ಕೆ ಬರುತ್ತಿದ್ದಾರೆ ಮತ್ತು “ನಾವು ಅವರಿಗೆ ನಮ್ಮ ಪ್ರಜಾಪ್ರಭುತ್ವವನ್ನು ತೋರಿಸಲು ಬಯಸುತ್ತೇವೆ ಎಂದು ಹೇಳಿದರು.