ಚಿತ್ರದುರ್ಗ : ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿಅನುಷ್ಠಾನಗೊಳಿಸದಿದ್ದರೆ ರಾಜ್ಯದ ಮುಖ್ಯಮಂತ್ರಿ ನಿವಾಸಕ್ಕೆ ಪಾದಯಾತ್ರೆ ಮಾಡುವುದಾಗಿ ಮಾದಿಗ ಸಮುದಾಯದ ರಾಜ್ಯ ಮುಖಂಡ ಪಾವಗಡ ಶ್ರೀರಾಮ್ ಎಚ್ಚರಿಸಿದ್ದಾರೆ.
ಹಿರಿಯೂರು ತಾಲ್ಲೂಕು ದಲಿತಪರಸಂಘಟನೆಗಳ ಒಕ್ಕೂಟ ಪಟ್ರೆಹಳ್ಳಿಯಿಂದಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ ನಡೆಸಿ ನಂತರ ಮಾತನಾಡಿದ ಅವರು30 ವರ್ಷಗಳಿಂದ ಎಲ್ಲಾಪಕ್ಷಗಳು ಮಾದಿಗರಿಗೆ ಮೋಸ ಮಾಡುವ ಮೂಲಕ,ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ.
ಒಳ ಮೀಸಲಾತಿಜಾರಿಗೊಳಿಸುವವರೆಗೂ,ಈ ಹೋರಾಟಗಳುನಿಲ್ಲುವುದಿಲ್ಲ. ಮುಖ್ಯಮಂತ್ರಿಸಿದ್ದರಾಮಯ್ಯನವರು ಸಾಮಾಜಿಕ ನ್ಯಾಯದ ಬಗ್ಗೆಮಾತನಾಡುವ ಬದಲು ಪರಿಶಿಷ್ಟ ಜಾತಿಯ ಎಲ್ಲಾ ಉಪ ಜಾತಿಗಳ ಮೇಲೆ ನಿಜವಾಗಿಯೂಕಾಳಜಿಯಿದ್ದರೆ ಮೊದಲು ಒಳ ಮೀಸಲಾತಿಜಾರಿಗೊಳಿಸಿ ದಲಿತ ವಿರೋಧಿಯಲ್ಲ ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.
ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿ ಮಠದಿಂದ2003 ರಲ್ಲಿ ಒಳ ಮೀಸಲಾತಿಗಾಗಿ ಮೊದಲುಪಾದಯಾತ್ರೆ ಆರಂಭಿ ಸಲಾಗಿತ್ತು.ಒಳ ಮೀಸಲಾತಿಜಾರಿಗೊಳಿಸದಿದ್ದರೆ ಪರಿಶಿಷ್ಟ ಜಾತಿಯಲ್ಲಿ 101ಉಪ ಜಾತಿಗಳು ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ. ನಮ್ಮ ನಮ್ಮಲ್ಲೆ ಒಡಕುಮೂಡಿಸುವದುರಾಲೋಚನೆಯಿಟ್ಟುಕೊಂಡಿರುವ ರಾಜ್ಯದಮುಖ್ಯಮಂತ್ರಿ ಸಿದ್ದರಾಮಯ್ಯನವರುಮಲ್ಲಿಕಾರ್ಜುನ ಖರ್ಗೆಯವರ ಕಡೆಕೈತೋರಿಸುತ್ತಿರುವುದು ಯಾವ ನ್ಯಾಯ?ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮೀಸಲಾತಿ ಕೊಟ್ಟಿದ್ದರೂ ಸಮಪಾಲು ಹಂಚಿಕೆಯಾಗಿಲ್ಲ. ದಲಿತರನ್ನು ಕೇವಲ ಮತಬ್ಯಾಂಕನ್ನಾಗಿ ಬಳಸಿಕೊಳ್ಳುವುದನ್ನು ಬಿಟ್ಟು ಒಳಮೀಸಲಾತಿ ಜಾರಿಗೊಳಿಸಬೇಕು ಇಲ್ಲವಾದಲ್ಲಿ ಕುರ್ಚಿ
ಖಾಲಿ ಮಾಡಿ ಎಂದುಕಿಡಿ ಕಾರಿದ್ದರು.
ಸಾಮಾಜಿಕ ನ್ಯಾಯ, ಭದ್ರತೆ ಬಗ್ಗೆ ಮಾತನಾಡುವಮುಖ್ಯಮಂತ್ರಿ ಸಿದ್ದರಾಮಯ್ಯನವರೆ ದಲಿತ
ವಿರೋಧಿ ಎನ್ನುವ ಕಳಂಕ ಅಂಟಿಸಿಕೊಳ್ಳಬೇಡಿ.ಸುಪ್ರೀಂಕೋರ್ಟ್ ತೀರ್ಪಿನನ್ವಯ ಮೊದಲು ಒಳ ಮೀಸಲಾತಿ ಜಾರಿಗೊಳಿಸಿ ಎಂದು ಒತ್ತಾಯಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯಬಿ.ಪಿ.ಪ್ರಕಾಶ್ಮೂರ್ತಿ, ಗುರುಸ್ವಾಮಿ, ಹುಲ್ಲೂರುಕುಮಾರಸ್ವಾಮಿ, ಹರಿರಾಮ್, ಲಕ್ಷ್ಮಿ, ಕೋಡಿಹಳ್ಳಿಸಂತೋಷ್, ಕೆ.ಟಿ.ಶಿವಕುಮಾರ್ ಸೇರಿದಂತೆ,ನೂರಾರು ಮಾದಿಗ ಸಮುದಾಯದ ಕಾರ್ಯಕರ್ತರು,ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು