ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,805 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸಕ್ರಿಯ ಪ್ರಕರಣ ಸಂಖ್ಯೆ 10,300ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,05,952ಕ್ಕೆ ಏರಿಕೆಯಾಗಿದ್ದು, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,837ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,300ಕ್ಕೆ ತಲುಪಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,64,815 ಕ್ಕೆ ತಲುಪಿದೆ.
ಕೋವಿಡ್ ಪ್ರರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಒಂದೇ 56,551 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,10,40,337 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.