ಕನ್ನಡದ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಮೂಲಕ ಗಮನ ಸೆಳೆದಿದ್ದ ನಟಿ ಅಕ್ಷತಾ ಕುಕಿ ನಿನ್ನೆ ಸೋಮವಾರ (ಮಾ.27)ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುಹಿರಿಯರು ನೋಡಿದ ಅವಿನಾಶ್ ಎಂಬುವವರ ಜೊತೆ ಅಕ್ಷತಾ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.
ಕೆಲವೊಂದು ಧಾರವಾಹಿ ಹಾಗೂ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದಲ್ಲಿ ನಟಿಸಿದ್ದ ಅಕ್ಷತಾ ಕುಕಿ ಬಿಗ್ ಬಾಸ್ ಒಟಿಟಿಗೆ ಕಾಲಿಡುವ ಮೂಲಕ ಅಪಾರ ಅಭಿಮಾನಿಗಳ ಮನಗೆದಿದ್ದರು. ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಹೊಸ ಜೀವನ ಆರಂಭಿಸಿದ್ದಾರೆ.
ಗುರುಹಿರಿಯರು ನಿಶ್ಚಯಿಸಿದ ಹುಡುಗಿನ ಜೊತೆ ಎರಡು ತಿಂಗಳ ಹಿಂದೆ ಅಕ್ಷತಾ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಅವಿನಾಶ್ ಜೊತೆ ಮಾರ್ಚ್ 27ರಂದು ಅಕ್ಷತಾ ಸಪ್ತಪದಿ ತುಳಿದಿದ್ದಾರೆ. ಬೆಳಗಾವಿಯಲ್ಲಿ ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆ ನಡೆದಿದೆ.
ಅಕ್ಷತಾ ಮದುವೆಯಾಗಿರುವ ವರ ಅವಿನಾಶ್, ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟಿರುವ ನವಜೋಡಿಗೆ ಕಿರುತೆರೆ ಕಲಾವಿದರು, ಸ್ನೇಹಿತರು, ಫ್ಯಾನ್ಸ್ ಶುಭ ಹಾರೈಸಿದ್ದಾರೆ.