ಕಲಘಟಗಿ: ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪ ದಲ್ಲಿ ಅ. 7ರ ಸೋಮವಾರ ಬೆಳಗ್ಗೆ 11ಕ್ಕೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿಸ್ಕೃತಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ಜಾಥಾ ಹಾಗೂ ವ್ಯಸನಮುಕ್ತ ಸಾಧಕರ ಸಮಾವೇಶದ ವೇದಿಕೆ ಕಾರ್ಯಕ್ರಮ ಜರುಗಿತು.
ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಧಾರವಾಡ ಜಿಲ್ಲೆಯ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.
ಟ್ರಸ್ಟ್ ಹಾಗೂ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳ
ಕಾರ್ಯ ಕ್ಷೇತ್ರದ ಎಲ್ಲ ಸಿಬ್ಬಂದಿ, ಒಕ್ಕೂಟ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ಕಾರ್ಯಕ್ರಮ ಜರುಗಿತು. ಬೆಳಗ್ಗೆ 10ಕ್ಕೆ ಪಟ್ಟಣದ ಯುವಶಕ್ತಿ
ಸರ್ಕಲ್ನಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಗ್ರಹಿಸಲು ಆಯೋಜಿಸಿದ್ದ ಬೃಹತ್ ಜಾಥಾಕ್ಕೆ ಹಿರಿಯ ನ್ಯಾಯಾಧೀಶ ರವೀಂದ್ರ ಹೊನೋಲೆ ಅವರು ಅನೇಕ ಗಣ್ಯರ ಜೊತೆ ಚಾಲನೆ ನೀಡಿದರು. ಜಾಥಾ ಬಾಲ ಮಾರುತಿ ಮಂದಿರದ ಮುಖೇನ ಬೆಂಡಿಗೇರಿ ಓಣಿ ಮಾರ್ಗವಾಗಿ ಬಸವೇಶ್ವರ ಕಲ್ಯಾಣ ಮಂಟಪ ತಲುಪಿತ್ತು.