ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ಸ್ಕಿ ಬರ್ಲಿನ್ಗೆ ಪ್ರಯಾಣ ಬೆಳೆಸಲಿದ್ದು, ಜರ್ಮನಿ ಚಾನ್ಸಲರ್ ಒಲಾಫ್ ಸ್ಕಾಲ್ಝ್ ಹಾಗೂ ಅಧ್ಯಕ್ಷ ಫ್ರಾಂಕ್-ವಾಲ್ಟರ್ ಸ್ಟೈನ್ಮಿಯರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಝಲೆನ್ಸ್ಕಿ ಶುಕ್ರವಾರ ಬರ್ಲಿನ್ಗೆ ಭೇಟಿ ನೀಡಲಿದ್ದಾರೆ. ಮೊದಲು ಸ್ಕಾಲ್ಝ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿರುವ ಝಲೆನ್ಸ್ಕಿ , ಬಳಿಕ ಅಧ್ಯಕ್ಷ ಫ್ರಾಂಕ್-ವಾಲ್ಟರ್ ಸ್ಟೈನ್ಮಿಯರ್ ಅವರನ್ನು ಭೇಟಿಯಾಗಲಿದ್ದಾರೆ. ಇದು ಯೂರೋಪ್ ಪ್ರವಾಸದ ಭಾಗವಾಗಿದೆ’ ಎಂದು ತಿಳಿಸಿದೆ.
ಝಲೆನ್ಸ್ಕಿ ಯೂರೋಪ್ನಲ್ಲಿ ತನ್ನ ಮಿತ್ರ ರಾಷ್ಟ್ರಗಳ ನಾಯಕರನ್ನು ಭೇಟಿ ಮಾಡುವ ಯೋಜನೆಯಲ್ಲಿದ್ದರು. ಆದರೆ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಭೇಟಿ ರದ್ದಾದ ಕಾರಣ, ಜರ್ಮನಿಯ ರಾಮ್ಸ್ಟೇಯ್ನ್ನಲ್ಲಿ ನಡೆಯಬೇಕಿದ್ದ ಸಮಾವೇಶ ಮುಂದೂಡಿಕೆಯಾಗಿದೆ. ಇದರಿಂದ ಝೆಲೆನ್ಸ್ಕಿ ಉದ್ದೇಶಕ್ಕೆ ಹಿನ್ನಡೆಯಾಗಿದೆ.