ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.