ಅದೆಷ್ಟೋ ಜನ ಬಿಗ್ ಬಾಸ್ ಕಾರ್ಯಕ್ರಮ ನೋಡುತ್ತಿರುವುದು ಸುದೀಪ್ ಕಾರಣದಿಂದ. ಅವರು ಸ್ಟೇಜ್ ಮೇಲೆ ಬಂದ್ರೆ ಅಭಿಮಾನಿಗಳ ಹೃದಯ ಹಕ್ಕಿಯಂತೆ ಹಾರಾಡುತ್ತೆ. ಇನ್ನೂ ಸ್ಪರ್ಧಿಗಳು ಸುದೀಪ್ ಬಂದ್ರು ಅಂದ್ರೆ ಫುಲ್ ಸೈಲೆಂಟ್ ಆಗಿ ಬಿಡ್ತಾರೆ. ಆದರೆ ಇದೀಗ ಕಿಚ್ಚನ ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಯೆಸ್. ಸುದೀಪ್ ಬಿಗ್ ಬಾಸ್ ನಿರೂಪಣೆಯಿಂದ ಹೊರ ಬರಲು ನಿರ್ಧರಿಸಿದ್ದು ಅಧಿಕೃತ ಘೋಷಣೆ ಮಾಡಿದ್ದಾರೆ.
ಯೆಸ್. ಕಿಚ್ಚ ಸುದೀಪ್ ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಕಿಚ್ಚ ಇದೀಗ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಸ್ತುತ ಸುದೀಪ್ ಬಿಗ್ ಬಾಸ್ ಕನ್ನಡ ಸೀಸನ್ 11 ನಡೆಸಿಕೊಡುತ್ತಿದ್ದಾರೆ. ಆದರೆ ಮುಂದಿನ ಸೀಸನ್ಗೆ ತಾವು ನಿರೂಪಣೆ ಮಾಡುವುದಿಲ್ಲ ಎಂದು ಸೋಶಿಯಲ್ ಮೀಡಿಯಾ ಮೂಲಕ ಅಧಿಕೃತಪಡಿಸಿದ್ದಾರೆ. ಸುದೀಪ್ ಈ ಪೋಸ್ಟ್ ಪ್ರತಿಯೊಬ್ಬರಿಗೂ ಅಚ್ಚರಿ ಮೂಡಿಸಿದೆ.
‘ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ’ ಎಂದು ಸುದೀಪ್ ಬರೆದುಕೊಂಡಿದ್ದಾರೆ.
‘ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್ ಬಾಸ್. ಇಷ್ಟು ವರ್ಷಗಳ ಕಾಲ ಬಿಗ್ ಬಾಸ್ ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ’ ಎಂದು ಸುದೀಪ್ ಅವರು ಶಾಕಿಂಗ್ ವಿಷಯ ತಿಳಿಸಿದ್ದಾರೆ.
11ನೇ ಸೀಸನ್ ಆರಂಭದಲ್ಲೇ ಸುದೀಪ್ ಅವರು ಈ ಬಾರಿ ಬಿಗ್ ಬಾಸ್ ನಿರೂಪಣೆ ಮಾಡುವುದು ಅನುಮಾನ ಎಂಬ ವಿಷಯ ಕೇಳಿಬಂದಿತ್ತು. ಆದರೆ ಶೋ ಆಯೋಜಕರು ಸುದೀಪ್ ಅವರ ಮನ ಒಲಿಸಿದ್ದರಿಂದ ಅವರು ಮುಂದುವರಿದರು. ಆದರೆ ಇದೀಗ ಸುದೀಪ್ ತೆಗೆದುಕೊಂಡಿರುವ ಈ ನಿರ್ಧಾರದಿಂದ ಪ್ರತಿಯೊಬ್ಬರು ಬೇಸರಗೊಂಡಿದ್ದಾರೆ.