ತನ್ನ ಮಾಜಿ ಪತಿಯನ್ನು ಏಕಾಂತ ಸೆರೆಮನೆಯಲ್ಲಿ ಇರಿಸಲಾಗಿದ್ದು, ಅಧಿಕಾರಿಗಳು ಜೈಲಿನ ಸೆಲ್ನಲ್ಲಿ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಿದ್ದಾರೆ ಮತ್ತು ಪುತ್ರರಿಗೆ ವಾರಕ್ಕೊಮ್ಮೆ ಕರೆ ಮಾಡಲೂ ಅನುಮತಿಸಲಾಗುತ್ತಿಲ್ಲ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ.
ಶೆಹಬಾಜ್ ಷರೀಫ್ ನೇತೃತ್ವದ ಸರಕಾರದ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮ್ರಾನ್ ಖಾನ್ ಪತ್ನಿ ಮಾಡಿದ್ದಾರೆ. ಇಸ್ಲಾಮಾಬಾದ್ನಲ್ಲಿ ನಡೆಯುತ್ತಿರುವ ಎರಡು ದಿನಗಳ ಶೃಂಗಸಭೆಯ ನಡುವೆಯೇ ಗೋಲ್ಡ್ ಸ್ಮಿತ್ ಅವರು ಆರೋಪಗಳು ಕೇಳಿಬಂದಿವೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸೇರಿದಂತೆ ಸದಸ್ಯ ರಾಷ್ಟ್ರಗಳ ಉನ್ನತ ನಾಯಕರು SCO ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ.