ಬೆಂಗಳೂರು:- ಬಿಜೆಪಿ ಟಿಕೆಟ್ ಹೆಸರಲ್ಲಿ 2 ಕೋಟಿ ರೂ. ವಂಚನೆ ಮಾಡಿದ ಆರೋಪದಡಿ ಸಚಿವ ಪ್ರಹ್ಲಾದ್ ಜೋಶಿ ಸಹೋದರರ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ.
ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ 2 ಕೋಟಿ ಸುಲಿಗೆ ಮಾಡಿದ್ದ ಆರೋಪದ ಅಡಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹೋದರ, ಸಹೋದರಿ ಸೇರಿದಂತೆ ಮೂವರ ವಿರುದ್ಧ ಬಸವೇಶ್ವನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಗೋಪಾಲ ಜೋಶಿ, ವಿಜಯಲಕ್ಷ್ಮಿ ಜೋಶಿ ಹಾಗೂ ಅಜಯ್ ಜೋಶಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸುನಿತಾ ಚವ್ಹಾಣ್ ಅವರು ದೂರು ನೀಡಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.