ರಾಮನಗರ:- ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ಜವಾಬ್ದಾರಿ ನನ್ನ ಮೇಲಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ ಹೇಳುವಂತೆ ಚನ್ನಪಟ್ಟಣ ಕ್ಷೇತ್ರಕ್ಕೆ ಎನ್ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಹೊಣೆಗಾರಿಕೆಯನ್ನು ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸಚಿವನ ಮೇಲೆ ಹೊರೆಸಿದ್ದಾರೆ.
ಚನ್ನಪಟ್ಟಣವು ಕುಮಾರಸ್ವಾಮಿ ಪ್ರತಿನಿಧಿಸಿದ ಕ್ಷೇತ್ರವಾಗಿರುವುದರಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆಯಂತೆ. ಹಾಗಂತ, ತಾನು ದುಡುಕಿನ ನಿರ್ಧಾರವನ್ನೇನೂ ತೆಗೆದುಕೊಳ್ಳಲ್ಲ, ರಾಜ್ಯ ರಾಜಕೀಯಕ್ಕೆ ಒಳಿತಾಗುವ ತೀರ್ಮಾನ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.