ಭಾರತ ಮತ್ತು ಪಾಕಿಸ್ತಾನ ಹಿಂದಿನದನ್ನು ಬಿಟ್ಟು ಭವಿಷ್ಯದ ಬಗ್ಗೆ ಯೋಚಿಸುತ್ತವೆ ಎನ್ನುವ ನಂಬಿಕೆ ಇದೆ. ಪ್ರಧಾನಿ ಮೋದಿ ಇಲ್ಲಿಗೆ ಬರಬೇಕೆಂದು ಬಯಸಿದ್ದೆ, ವಿದೇಶಾಂಗ ಸಚಿವ ಜೈಶಂಕರ್ ಇಲ್ಲಿಗೆ ಬಂದಿದ್ದು ಹೊಸ ಆರಂಭಕ್ಕೆ ನಾಂದಿ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.
ಎಸ್ ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ ತೆರಳಿದ್ದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭೇಟಿಯ ನಂತರ ಪಾಕಿಸ್ತಾದ ಮಾಜಿ ಪ್ರಧಾನಿ ನವಾಜ್ ಷರೀಫ್ ಪ್ರತಿಕ್ರಿಯಿಸಿ, ಎರಡೂ ಕಡೆಯಿಂದ ಕೊರತೆಗಳಿವೆ ಆದರೆ ಮತ್ತೆ ಸ್ನೇಹಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲ ಎಂದಿದ್ದಾರೆ.
ಇದು ಆರಂಭವಷ್ಟೇ. ಭಾರತ ಮತ್ತು ಪಾಕಿಸ್ತಾನ ಹಿಂದಿನದನ್ನು ಬಿಟ್ಟು ಭವಿಷ್ಯದ ಬಗ್ಗೆ ಯೋಚಿಸುತ್ತವೆ ಎನ್ನುವ ನಂಬಿಕೆ ಇದೆ. ಪ್ರಧಾನಿ ಮೋದಿ ಇಲ್ಲಿಗೆ ಬರಬೇಕೆಂದು ಬಯಸಿದ್ದೆ, ವಿದೇಶಾಂಗ ಸಚಿವ ಜೈಶಂಕರ್ ಇಲ್ಲಿಗೆ ಬಂದಿದ್ದು ಹೊಸ ಆರಂಭಕ್ಕೆ ನಾಂದಿ ಹಾಡಿರುವುದು ಸಂತಸ ತಂದಿದೆ ಎಂದು ನವಾಜ್ ಷರೀಫ್ ಹೇಳಿದ್ದಾರೆ.
ಸದ್ಯಕ್ಕೆ ಯಾವುದೇ ರೀತಿಯ ವಿವಾದವನ್ನು ಬದಿಗಿಟ್ಟು ಸಕಾರಾತ್ಮಕ ಅಂಶಗಳನ್ನು ಮಾತ್ರ ಪ್ರಸ್ತಾಪಿಸಿ, ನಾವು ಈಗ ಸಕಾರಾತ್ಮಕ ಹೆಜ್ಜೆಗಳನ್ನು ಇಡಬೇಕಾಗಿದೆ, ಹೊಸದೊಂದು ಪ್ರಾರಂಭವಾಗಿದೆ ಎಂದು ಅವರು ಹೇಳಿದರು.
ಭಾರತ-ಪಾಕಿಸ್ತಾನ ಈಗಾಗಲೇ 75 ವರ್ಷಗಳನ್ನು ವ್ಯರ್ಥ ಮಾಡಿವೆ, ಮುಂದಿನ 75 ವರ್ಷಗಳು ಹೀಗಾಗದಿರಲಿ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ಸಂಬಂಧಗಳು ಕೊನೆಗೊಂಡಿವೆ. ಬಡತನದಿಂದ ಬಳಲುತ್ತಿರುವ ನೆರೆಯ ದೇಶವು ಪ್ರಧಾನಿ ನರೇಂದ್ರ ಮೋದಿಯವರಿಂದ ಉಭಯ ದೇಶಗಳ ನಡುವೆ ಮತ್ತೆ ಸೌಹಾರ್ದತೆ ಮೂಡಲಿ, ಸಂಬಂಧ ಸುಧಾರಿಸಲಿ ಎಂದು ಬಯಸಿದೆ.
ಭಾರತ ಮತ್ತು ಪಾಕಿಸ್ತಾನ ಎರಡೂ ಈಗ ವ್ಯಾಪಾರ, ಹವಾಮಾನ ಬದಲಾವಣೆ, ವ್ಯಾಪಾರ, ಉದ್ಯಮ, ಕ್ರೀಡೆ ಇತ್ಯಾದಿಗಳಲ್ಲಿ ಮುಂದುವರಿಯಬಹುದು ಎಂದು ನವಾಜ್ ಷರೀಫ್ ಹೇಳಿದರು. ವಾಜಪೇಯಿ ಅವರೊಂದಿಗಿನ ಅವರ ಭೇಟಿ ಮತ್ತು ಅವರಿಬ್ಬರೂ ಉತ್ತಮ ಬಾಂಧವ್ಯಕ್ಕೆ ಹೇಗೆ ಅಡಿಪಾಯ ಹಾಕಿದರು ಎಂಬುದನ್ನು ನಾನು ನೆನಪಿಸಿಕೊಳ್ಳುತ್ತೇನೆ ಎಂದರು.