ಕೋಲಾರ : ಕೋಲಾರ ಜಿಲ್ಲೆಯಲ್ಲಿ ಮತ್ತೆ ಅಲರ್ಟ್ ಆದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಒತ್ತುವರಿಯಾಗಿದೆ ಎನ್ನಲಾದ ಅರಣ್ಯ ಇಲಾಖೆಗೆ ಸೇರಿದ ಜಮೀನು ಒತ್ತುವರಿ ತೆರವು ಗೊಳಿಸುವ ಕಾರ್ಯಾಚರಣೆಯನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಿಸ್ನಹಳ್ಳಿ ಗ್ರಾಮದಲ್ಲಿ ಜಂಟಿ ಸರ್ವೆ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.
ಸರ್ಕಾರದ ಹೊಸ ಆದೇಶ ಅನ್ವಯ ಜಂಟಿ ಸರ್ವೇ ಕಾರ್ಯಕ್ಕೆ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ಕಾರ್ಯವನ್ನು ನಡೆಸುತ್ತಿದ್ದಾರೆ.
ಅರಣ್ಯ ಇಲಾಖೆ ಎರಡನೇ ಹಂತದ ಒತ್ತುವರಿ ತೆರವು ಕಾರ್ಯಾಚರಣೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಲ್ಲಿ ಜನರ ಮನವೊಲಿಸಿ ಸರ್ವೇ ಕಾರ್ಯವನ್ನು ನಡೆಸುತ್ತಿರುವ ಅಧಿಕಾರಿಗಳು.