ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ಪಡೆದ ಆರೋಪ : ಗೋಪಾಲ್ ಜೋಶಿಗೆ ಹುಡುಕಾಟ
ಟಿಕೆಟ್ ಕೊಡಿಸುವುದಾಗ ಮನವನ್ನು ವಿಜಯಪುರ ಜಿ ನಾಗಠಾಣ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ 2 ಕೋಟಿ ಸುಲಿಗೆ ಮಾಡಿದ್ದ ಆರೋಪದ ಅಡಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಗೋಪಾಲ ಜೋಶಿ ಸೇರಿ ಮೂವರ ವಿರುದ್ಧ ದೇವಾನಂದ್ ಚವ್ಹಾಣ್ ಪತ್ನಿ ಸುನಿತಾ ಚವ್ಹಾಣ್ ದೂರು ನೀಡಿದ್ದು,ಬೆಂಗಳೂರಿನ ಬಸವೇಶ್ವನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಈ ಕುರಿತು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಲ್ದಾದ್ ಜೋಶಿ, ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ,ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ನಮಗೆ ಸಂಪರ್ಕವಿಲ್ಲ.ಗೋಪಾಲ್ ಜೋಶಿ ಮಾತ್ರವಲ್ಲ, ಯಾರೇ ಆಗಲಿ. ಅವರು ತಮ್ಮ ಕೆಲಸ
ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಮಾಡಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಾಲಯದ ಅಫಿಡವಿಟ್ನಲ್ಲಿ ಅದರ ವಿವರಗಳಿವೆ ಎಂದು ದಾಖಲೆ ಪ್ರದರ್ಶಿಸಿದರು.ಇದನ್ನೆಲ್ಲ ನೋಡಿದರೆ ಎಲ್ಲವೂ ಬೋಗಸ್ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಹೇಳಿದರು.