ಬೆಂಗಳೂರು:- ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ತಾಯಿ ವಿಧಿವಶರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಸುದೀಪ್ ಮನೆಯಲ್ಲಿ ಶೋಕದ ವಾತವರಣ ಮನೆ ಮಾಡಿದೆ.