ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಮಳೆ ಆಗಿದ್ದು,ವಾಹನ ಸವಾರರು ಹೈರಾಣಾಗಿದ್ದಾರೆ.ಮೆಜೆಸ್ಟಿಕ್, ಶಾಂತಿನಗರ, ತ್ಯಾಗರಾಜನಗರ, ಜಯನಗರ, ಜೆಪಿನಗರ, ಶ್ರೀನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಜಾಲಹಳ್ಳಿ,
ಪೀಣ್ಯ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆ.ಆರ್.ಪುರಂ, ಟಿನ್ ಫ್ಯಾಕ್ಟರಿ ಮಹದೇವಪುರ, ಬೆಳ್ಳಂದೂರು, ಮಾರತ್ತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆ.ಪಿ.ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, R.Rನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವೆಡೆ ಮಳೆಯಾಗಿದೆ.
ನಾಗಮಂಗಲ, ನಾಯಕನಹಟ್ಟಿ, ಬರಗೂರು, ನಾರಾಯಣಪುರ, ಕವಡಿಮಟ್ಟಿ, ಕಕ್ಕೇರಿ, ಹೆಸರಘಟ್ಟ, ಬೆಳ್ಳೂರು, ಕೆಂಭಾವಿ, ಚಿತ್ರದುರ್ಗ, ಬೇಲೂರು, ಕೃಷ್ಣರಾಜಪೇಟೆ, ಹುಣಸಗಿ, ರೋಣ, ರಾಯಚೂರು, ಮುರಗೋಡು, ಯಡವಾಡ, ಗುಬ್ಬಿ, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಮಾಗಡಿ, ಪರಶುರಾಂಪುರ, ಶಾಹಪುರ, ಸೇಡಂ, ಶೋರಾಪುರ, ಬಾದಾಮಿ, ಯಲಬುರ್ಗಾದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.