ಗದಗ:- ಪೈಪ್ ಲೈನ್ ದುರಸ್ಥಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದ ಹಿನ್ನೆಲೆ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರರಾಗಿದ್ದಾರೆ. 24×7 ಪೈಪ್ ಲೈನ್ ದುರಸ್ಥಿ ಮಾಡುವಾಗ ಕಾರ್ಮಿಕರ ಮೇಲೆ ಮಣ್ಣು ಕುಸಿದಿದೆ.
ಓರ್ವ ಗಾಯಾಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರೆ, ಮತ್ತೊಬ್ಬನಿಗೆ ಗಂಭೀರಗಾಯವಾಗಿದೆ. ಗದಗ ನಗರದ ಟಿಪ್ಪು ಸುಲ್ತಾನ್ ಸರ್ಕಲ್ ಬಳಿ ಪೈಪ್ ಲೈನ್ ರಿಪೇರಿ ವೇಳೆ ಘಟನೆ ಜರುಗಿದೆ.
ಘಟನೆಯಲ್ಲಿ ಗಾಯಗೊಂಡಿದ್ದ ನಜೀರ್ ಸಾಬ್, ಮಂಜುನಾಥ್ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೇ ಜಿಮ್ಸ್ ಆಸ್ಪತ್ರೆಯಲ್ಲಿ ನಜೀರ್ ಸಾಬ್ ನವಲಗುಂದ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಗಾಯಾಳು ಮಂಜಯನಾಥ್ ಪಲ್ಲೇದ್ ಗೆ ಚಿಕಿತ್ಸೆ ಮುಂದುವರೆದಿದೆ.
ಗ್ಯಾಸ್ ಪೈಪ್ ಲೈನ್ ರಿಪೇರಿಗೆ ವೇಳೆ ನೀರಿನ ಪೈಪ್ ಡ್ಯಾಮೇಜ್ ಗೊಂಡಿತ್ತು. ಈ ವೇಳೆ ನೀರಿನ ಪೈಪ್ ರಿಪೇರಿ ಮಾಡಲು ಇಬ್ಬರು ಕಾರ್ಮಿಕರು ಮುಂದಾಗಿದ್ದರು.
ಏಕಾಏಕಿ ಭೂಮಿ ಕುಸಿತದಿಂದಾಗಿ ಮಣ್ಣಿನ ಅಡಿಯಲ್ಲಿ ಕಾರ್ಮಿಕರು ಸಿಲುಕಿದ್ದರು. ಕೂಡಲೇ ಜಿಮ್ಸ್ ಆಸ್ಪತ್ರೆಗೆ ಕಾರ್ಮಿಕರನ್ನ ಸಾಗಿಸಿ ಚಿಕಿತ್ಸೆ ನೀಡಲಾಗಿತ್ತು.
ಚಿಕಿತ್ಸೆ ಫಲಿಸದೇ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.