ಹವಾಮಾನ ಬದಲಾವಣೆಯ ಪರಿಣಾಮ ಎದುರಿಸಲು ಹೆಚ್ಚುವರಿಯಾಗಿ 2 ಮಿಲಿಯನ್ ಡಾಲರ್ ಹಣಕಾಸು ನೆರವು ನೀಡುವಂತೆ ಪಾಕಿಸ್ತಾನ ಅಂತಾರಾಷ್ಟ್ರೀಯ ಹಣಕಾಸು ನಿಧಿಗೆ (ಐಎಂಎಫ್) ಮನವಿ ಮಾಡಿದೆ.
ಈ ತಿಂಗಳಾಂತ್ಯದಲ್ಲಿ ಐಎಂಎಫ್ ಸಭೆ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುವರಿ ನಿಧಿ ನೀಡುವಂತೆ ಪಾಕಿಸ್ತಾನ ಹಣಕಾಸು ಸಚಿವ ಮೊಹಮ್ಮದ್ ಔರಂಗಜೇಬ್ ವಿನಂತಿಸಿಕೊಂಡಿದ್ದಾರೆ.
ಅಕ್ಟೋಬರ್ 21ರಿಂದ ಅಕ್ಟೋಬರ್ 26ರವರೆಗೆ ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ಐಎಂಎಫ್ ಮತ್ತು ವಿಶ್ವಬ್ಯಾಂಕ್ ಗ್ರೂಪ್ನ ವಾರ್ಷಿಕ ಸಭೆ ಆಯೋಜನೆಯಾಗಿದೆ. ಹೆಚ್ಚುವರಿ ಸಾಲ ಮರುಪಾವತಿಸುವ ಪಾಕಿಸ್ತಾನದ ಸಾಮರ್ಥ್ಯದ ಬಗ್ಗೆ ಈಗಾಗಲೇ ಐಎಂಎಫ್ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ ಇದೀಗ ಕೇಳಿರುವ 2 ಮಿಲಿಯನ್ ಡಾಲರ್ ಹಣಕಾಸು ನೆರವಿನ ಕುರಿತು ಐಎಂಎಫ್ ಯಾವ ರೀತಿ ಪ್ರತಿಕ್ರಿಯೆ ನೀಡುತ್ತೆ ಕಾದು ನೋಡಬೇಕಿದೆ.