ಇತ್ತೀಚೆಗೆ ತೆಲುಗಿನ ಬಿಗ್ ಬಾಸ್ ಸೀಸನ್ 8ಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ನಾಗಾರ್ಜುನ ನಿರೂಪಣೆಯಲ್ಲಿ ತೆಲುಗಿನ ಬಿಗ್ ಬಾಶ್ ಶೋ ನಡೆಯುತ್ತಿದ್ದು ಇದೀಗ ದೊಡ್ಮನೆಯಿಂದ ಬ್ರೇಕಿಂಗ್ ಸುದ್ದಿಯೊಂದು ಕೇಳಿ ಬಂದಿದೆ. ಬಿಗ್ ಬಾಸ್ನಲ್ಲಿರುವಾಗಲೇ ಖ್ಯಾತ ಯೂಟ್ಯೂಬರ್ ಗಂಗವ್ವಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.
ಯೂಟ್ಯೂಬರ್ ಗಂಗವ್ವಗೆ 60 ವರ್ಷ ದಾಟಿದರೂ ಯಾವ ಸ್ಪರ್ಧಿಗಳಿಗೂ ಕಮ್ಮಿಯಿಲ್ಲ ಎಂಬಂತೆ ಟಫ್ ಫೈಟ್ ಕೊಡುತ್ತಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿರುವ ಗಂಗಮ್ಮಗೆ ಸೋಮವಾರ ರಾತ್ರಿ (ಅ.21) ಹೃದಯಾಘಾತವಾಗಿದೆ ಎಂಬ ಸುದ್ದಿ ಕೇಳಿ ಬಂದಿದೆ. ಶೋನಲ್ಲಿರುವಾಗಲೇ ಈ ಘಟನೆ ನಡೆದಿದ್ದು, ಕೂಡಲೇ ಅವರಿಗೆ ವೈದ್ಯಕೀಯ ನೆರವು ಒದಗಿಸಲಾಗಿದೆ. ಸದ್ಯ ಅವರು ಪ್ರಾಣಪಾಯದಿಂದ ಪಾರಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ.
‘ಮೈ ವಿಲೇಜ್ ಶೋ’ ಮೂಲಕ ಯೂಟ್ಯೂಬ್ನಲ್ಲಿ ಹಾಸ್ಯ ಭರಿತ ವಿಡಿಯೋಗಳಿಂದ ಖ್ಯಾತಿ ಗಳಿಸಿದ್ದ ಗಂಗವ್ವ ಈ ಹಿಂದೆ ‘ಬಿಗ್ ಬಾಸ್ ಸೀಸನ್ 4’ರಲ್ಲಿ ಕೂಡ ಸ್ಪರ್ಧಿಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಅರ್ಧಕ್ಕೆ ಶೋ ತೊರೆದಿದ್ದರು. ಇದೀಗ ಮತ್ತೆ ತೆಲುಗಿನ ಸೀಸನ್ 8ರಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿಕೊಟ್ಟಿದ್ದು ಇದೀಗ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.