ರಷ್ಯಾ ಅಧ್ಯಕ್ಷ ಪುಟಿನ್ ನೇತೃತ್ವದ್ಲಲಿ ರಷ್ಯಾದಲ್ಲಿ ನಡೆದ ಬ್ರಿಕ್ಸ್ ಸಮ್ಮೇಳನದಿಂದ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಶಿ ಜಿನ್ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿದೆ.
2019, ಅಕ್ಟೋಬ್ನಲ್ಲಿ ಚೀನಾ ಅಧ್ಯಕ್ಷರು ತಮಿಳುನಾಡಿನ ಮಹಾಬಲಿಪುರಮ್ ಗೆ ಭೇಟಿ ನೀಡಿದ್ದು ಈ ವೇಳೆ ಮೋದಿ, ಜಿನ್ಪಿಂಗ್ರನ್ನು ಭೇಟಿಯಾಗಿದ್ದರು. ಐದು ವರ್ಷಗಳ ಬಳಿಕ ಮತ್ತೆ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸುತ್ತಿದ್ದಾರೆ. 2020ರಲ್ಲಿ ಗಾಲ್ವಾನ್ನಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವಿನ ಘರ್ಷಣೆ ನಡೆದಿತ್ತು. ನಂತರ ಉಭಯ ದೇಶಗಳ ನಡುವೆ ಉದ್ವಿಗ್ನಗೊಂಡಿತ್ತು. ಇದೀಗ ಎರಡು ದೇಶಗಳ ಮಾತುಕತೆ ಮತ್ತೆ ಭಾರತ ಹಾಗೂ ಚೀನಾ ಪರಿಸ್ಥಿತಿಯನ್ನು ಸುಧಾರಿಸುವ ಸಾಧ್ಯತೆ ಇದೆ.
ಪ್ರಧಾನಿ ಮೋದಿ ಮತ್ತು ಜಿನ್ಪಿಂಗ್ ನಡುವೆ ನಡೆಯಲಿರುವ ಸಭೆಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ. ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ದ್ವಿಪಕ್ಷೀಯ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪೂರ್ವ ಲಡಾಖ್ನಲ್ಲಿ ನಡೆಯುತ್ತಿದ್ದ ಗಡಿ ವಿವಾದ ಇತ್ಯರ್ಥಕ್ಕೆ ಒಪ್ಪಂದ ಆಗಿದೆ. ಎಲ್ಎಸಿಯಲ್ಲಿ ಗಸ್ತು ತಿರುಗುವ ಕುರಿತು ಉಭಯ ದೇಶಗಳ ನಡುವೆ ಒಪ್ಪಂದಕ್ಕೆ ಬರಲಾಗಿದೆ. ಕಳೆದ ಕೆಲವು ವಾರಗಳಿಂದ ಭಾರತ ಮತ್ತು ಚೀನಾದ ಸಂಧಾನಕಾರರು ಈ ವಿಷಯದ ಬಗ್ಗೆ ಸಂಪರ್ಕದಲ್ಲಿದ್ದಾರೆ. 2020ರಲ್ಲಿ ಈ ಪ್ರದೇಶಗಳಲ್ಲಿ ಉದ್ಭವಿಸಿದ ಸಮಸ್ಯೆಗಳಿಗೆ ಪರಿಹಾರ ಶೀಘ್ರದಲ್ಲೇ ಸಿಗಲಿದೆ ಎಂದು ವಿಕ್ರಮ್ ಮಿಸ್ರಿ ಭರವಸೆ ನೀಡಿದ್ದಾರೆ.