ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ ಕಾವು ಜೋರಾಗಿದ್ದು, ಅದರಲ್ಲೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದೆ.
ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು. ಬಳಿಕ ಇಬ್ಬರು ನಾಯಕರು ಒಂದೇ ಕಾರಿನಲ್ಲಿ ತೆರಳಿ ಸಿಎಂ ಸಿದ್ದರಾಯ್ಯನವರನ್ನು ಭೇಟಿಯಾಗಿದ್ದಾರೆ.
ಈ ಮೂಲಕ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ಯೋಗೇಶ್ವರ್ ನಿನ್ನೆಯವರೆಗೂ ಕಾದು ಕುಳಿತ್ತಿದ್ದರು. ಸಂಜೆ ವರೆಗೂ ಕಾಯುತ್ತೇನೆ ಎಂದು ಯೋಗೇಶ್ವರ್ ಅವರು ಪ್ರಲ್ಹಾದ್ ಜೋಶಿಸಂಸದ ಡಾ.ಸಿ.ಎನ್.
ಮಂಜುನಾಥ್ಗೆ ತಿಳಿಸಿ ಎಂದು ನಿನ್ನೆ ಚನ್ನಪಟ್ಟಣದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದರು. ಆದ್ರೆ, ಬಿಜೆಪಿ ಟಿಕೆಟ್ ಘೋಷಣೆ ಆಗದಿರುವ ಕಾರಣ ಸಿಪಿ ಯೋಗೇಶ್ವರ್ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದರು. ಬಳಿಕ ಒಂದೇ ಕಾರಿನಲ್ಲಿ ಇಬ್ಬರೂ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು