ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಳೆ ಅಬ್ಬರದ ಜತೆ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಕಟ್ಟಡ ಮಾಲೀಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಭುವನ್ ರೆಡ್ಡಿ ಬಂಧಿತ ವ್ಯಕ್ತಿ. ಅವಘಡ ಸಂಭವಿಸಿದ ಕಟ್ಟಡ ಭುವನ್ ರೆಡ್ಡಿ ಹೆಸರಿನಲ್ಲಿತ್ತು. ಈತ ಮೊದಲನೇ ಆರೋಪಿ ಮುನಿರಾಜ ರೆಡ್ಡಿಯ ಮಗ. ಹೆಣ್ಣೂರು ಪೊಲೀಸರು ಸದ್ಯ ಆರೋಪಿಯನ್ನ ಬಂಧಿಸಿದ್ದಾರೆ.
ಕಾಂಟ್ರಾಕ್ಟರ್ ಮುನಿಯಪ್ಪನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿಯಪ್ಪ 4ನೇ ಮಹಡಿವರೆಗೆ ಕಟ್ಟಡ ನಿರ್ಮಾಣ ಮಾಡಿದ್ದ. ಹೀಗಾಗಿ ಪೊಲೀಸರು ಆತನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಿಎನ್ಎಸ್ ಬಿಬಿಎಂಪಿ ಆರ್ಇಆರ್ಎ ಆಯಕ್ಟ್ ಹಾಗೂ ರೇರಾ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ಇವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ
ಈಗ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಆರಕ್ಕೇರಿದೆ. ಮೃತ ತ್ರಿಪಾಲ್ನ ಮೃತದೇಹವನ್ನ ಅವಶೇಷಗಳಿಂದ ಸಿಬ್ಬಂಗಳು ಹೊರತೆಗೆದಿದ್ದಾರೆ. ಬಿಎನ್ಎಸ್, ಬಿಬಿಎಂಪಿ ಆರ್ಇಆರ್ಎ ಆಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಮಿಕ ಮೊಹಮ್ಮದ್ ಹರ್ಷದ್ ನೀಡಿರೋ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ. ಬಿಎನ್ ಎಸ್ 105, 125(A) 125(B), 270,3(5) ಬಿಬಿಎಂಪಿ ಆಯಕ್ಟ್ 326, 327,328 (u/s3) ಅಡ್ಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.