ರಾಮನಗರ: ಬೊಂಬೆ ನಾಡಿನ ಮಿನಿ ಸಮರದಲ್ಲಿಸಿ..ಪಿ.ಯೋಗೇಶ್ವರ್ ನನ್ನ ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಮೂಲಕ,ದಳಪತಿಗಳಿಗೆ ಡಿಕೆ ಬದ್ರರ್ಸ್ ಮಾಸ್ಟರ್ ಸ್ಟ್ರೋಕ್ ನೀಡಿದ್ದಾರೆ. ಇದೀಗ ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಅಧಿಕೃತವಾಗಿ ಸಿಪಿ ಯೋಗೇಶ್ವರ್ ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಚನ್ನಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.
ಸಿಪಿ ಯೋಗೇಶ್ವರ್ ಗೆ ಅಪಾರ ಜನಸಾಗರದೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ , ಸಚಿವ ರಾಮಲಿಂಗಾ ರೆಡ್ಡಿ ಸಾಥ್ ನೀಡಿದ್ದಾರೆ. ಅಭಿವೃದ್ಧಿಗೆ ಕೈ ಜೋಡಿಸಬೇಕು ಎನ್ನುವ ದೃಷ್ಟಿಯಿಂದ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದು ಚನ್ನಪಟ್ಟಣದ ಸ್ವರೂಪವೇ ಬದಲಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ನಿಂದ ಯೋಗೇಶ್ವರ್ ಅವರೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದರು. ಅದರಂತೆ ಇಂದು ಯೋಗೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.