ಕಲಬುರಗಿ: ಕಲಬುರಗಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೋಲೀಸರು ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಕಮಿಷನರರೇಟ್ ವ್ಯಾಪ್ತಿಯ ಎಲ್ಲಾ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ನಿದ್ದೆಗಣ್ಣಲ್ಲಿದ್ದ ರೌಡಿ ಶೀಟರ್ ಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ನೂರಕ್ಕೂ ಅಧಿಕ ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಕಾನೂನು ಸುವ್ಯವಸ್ಥೆ ಹದಗೆಡದಂತೆ ಹಾಗು ರೌಡಿ ಚಟುವಟಿಕೆಯಲ್ಲಿ ಭಾಗವಹಿಸಿದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ..