ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಐದು ತಿಂಗಳ ಬಳಿಕ ಕೊನೆಗೂ ನಟ ದರ್ಶನ್ಗೆ ಜಾಮೀನು ಸಿಕ್ಕಿದೆ. ಆದರೆ ಈಗ ಕೇವಲ ಆರು ವಾರಗಳ ಮಧ್ಯಂತರ ಜಾಮೀನು ನೀಡಲಾಗಿದೆ. ದರ್ಶನ್ಗೆ ಜಾಮೀನು ಲಭ್ಯವಾದ ಬೆನ್ನಲ್ಲೆ ದರ್ಶನ್ ಪರ ವಕೀಲರ ತಂಡದ ಸುನಿಲ್ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್ಗೆ ಇರುವ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಮಾನ್ಯ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಎಲ್ಲ ಕಾನೂನು ಪ್ರಕ್ರಿಯೆಗಳು ಇಂದೇ ಮುಗಿದು ಇಂದೇ ದರ್ಶನ್ ಜೈಲಿನಿಂದ ಹೊರಬರುವ ಸಾಧ್ಯತೆ ಹೆಚ್ಚಿದೆ ಎಂದು ವಕೀಲ ಸುನಿಲ್ ಹೇಳಿದ್ದಾರೆ.
‘ನಾವು, ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದೆವು. ದರ್ಶನ್ ಅವರಿಗೆ ಬೆನ್ನು ಹುರಿಯಲ್ಲಿ ಸಮಸ್ಯೆ ಇದೆ. ಅವರ ಎಲ್5 ಮತ್ತು ಎಸ್1 ಅಲ್ಲಿ ಸಮಸ್ಯೆಯಿದ್ದು ಸೂಕ್ತ ಚಿಕಿತ್ಸೆ ತುರ್ತು ಅಗತ್ಯವಿದೆ. ದರ್ಶನ್ಗೆ ಈ ಸಮಸ್ಯೆ ಈಗ ಬಂದಿದ್ದಲ್ಲ, ಅಥವಾ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆದ ಬಳಿಕ ಬಂದಿದ್ದಲ್ಲ, ಅವರಿಗೆ ಈ ಸಮಸ್ಯೆ 2022-23 ರಿಂದಲೂ ಇದೆ. ಅದಕ್ಕೆ ಅವರು ಚಿಕಿತ್ಸೆ ಪಡೆದಿದ್ದರು ಸರಿ ಹೋಗಿರಲಿಲ್ಲ. ಅದರ ವರದಿಗಳನ್ನು ನಾವು ನ್ಯಾಯಾಲಯಕ್ಕೆ ಸಲ್ಲಿಸಿದ್ದೆವು’ ಎಂದಿದ್ದಾರೆ.
ದರ್ಶನ್ರನ್ನು ತಪಾಸಣೆ ಮಾಡಿರುವ ವೈದ್ಯರು ಸಹ ಮುಚ್ಚಿದ ಲಕೋಟೆಯನ್ನು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದನ್ನೆಲ್ಲ ಪರಿಗಣಿಸಿ ಈಗ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಇನ್ನು ದರ್ಶನ್ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂಬುದನ್ನು ಅವರು ಮತ್ತು ಅವರ ಕುಟುಂಬದವರು ನಿರ್ಧಾರ ಮಾಡುತ್ತಾರೆ. ಅವರು ನಿರ್ಧಾರ ಮಾಡಿದ ಬಳಿಕ ಅದರ ವಿವರವನ್ನು ನಾವು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದೇವೆ’ ಎಂದು ವೈದ್ಯರು ಹೇಳಿದರು.
ಈಗ ದರ್ಶನ್ಗೆ ಮಧ್ಯಂತರ ಜಾಮೀನು ಮಾತ್ರವೇ ಮಂಜೂರಾಗಿದೆ. ಆದರೆ ನಿಯಮಿತ ಜಾಮೀನು ಮಂಜೂರಾಗಿಲ್ಲ. ಮಧ್ಯಂತರ ಜಾಮೀನು ಅವಧಿ ಮುಗಿದ ಬಳಿಕ ನಿಯಮಿತ ಜಾಮೀನಿಗೆ ನಾವು ಅರ್ಜಿ ಹಾಕಲಿದ್ದೇವೆ. ಅದು ನಮ್ಮ ಜವಾಬ್ದಾರಿಯಾಗಿದ್ದು, ದರ್ಶನ್ಗೆ ನಿಯಮಿತ ಜಾಮೀನು ಕೊಡಿಸುವ ಪ್ರಯತ್ನವನ್ನು ನಾವು ಮಾಡಲಿದ್ದೇವೆ’ ಎಂದು ಸುನೀಲ್ ತಿಳಿಸಿದರು.