ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 5 ತಿಂಗಳ ಬಳಿಕ ದರ್ಶನ್ ರಿಲೀಸ್ ಆಗಿದ್ದು, ಅಭಿಮಾನಿಗಳು ಹಾಗೂ ಕುಟುಂಬಕ್ಕೆ ಸಿಹಿ ಸುದ್ದಿ ಸಿಕ್ಕಂತಾಗಿದೆ.
ಷರತ್ತುಬದ್ಧ ಜಾಮೀನು ಸಿಕ್ಕಿರುವ ಹಿನ್ನೆಲೆ, ದರ್ಶನ್ ಮೇಲೆ ಪೊಲೀಸರು ಹೆಚ್ಚಿನ ನಿಗಾ ಇಟ್ಟಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದ್ರೂ ನೆಮ್ಮದಿಯಿಂದ ಇರವುದಕ್ಕೆ ಸಾಧ್ಯವಾದಂತೆ ಕಾಣುತ್ತಿಲ್ಲ. ಕಾರಣ ದರ್ಶನ್ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ದರ್ಶನ್ನ ಪ್ರತಿಯೊಂದು ಚಲನವಲನದ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.
ಸದ್ಯ ಬೆಂಗಳೂರಿನ ಹೊಸಕೆರೆಹಳ್ಳಿ ನಿವಾಸದಲ್ಲಿ ಬೀಡುಬಿಟ್ಟಿರುವ ನಟ ದರ್ಶನ್ ಇಂದು ಮಗ ವಿನೀಶ್ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಇಂದು ಮದ್ಯಾಹ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.