ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಬಾಲಕನ ಶವ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಜರುಗಿದೆ.
ಮೃತ ಬಾಲಕನನ್ನು 12 ವರ್ಷದ ಮೈಲಾರ ಹುಲಮನಿ ಎಂದು ಗುರುತಿಸಲಾಗಿದೆ.
ಮಂಗಳವಾರ ಮೈಲಾರ ಮನೆಯಿಂದ ಬಾಲಕ ನಾಪತ್ತೆಯಾಗಿದ್ದ. ಆತನಿಗಾಗಿ ಹುಡುಕಾಟ ಸಹ ನಡೆಸಲಾಗಿತ್ತು. ಆದರೆ, ನಿನ್ನೆ ಬೆಳಗಿನಜಾವ ಬಾಲಕ ಮೈಲಾರ, ನರೇಂದ್ರ ಗ್ರಾಮದ ದ್ಯಾಮಡ್ಡಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಬಾಲಕನ ಶವವನ್ನು ಹೊರತೆಗೆದಿದ್ದಾರೆ.