ಚಾಮರಾಜನಗರ: ಜೆಡಿಎಸ್ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುವ ಬಗ್ಗೆ ಚರ್ಚೆ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗುಸು-ಗುಸು ಚರ್ಚೆ ನಡೆಯುತ್ತಿದೆ, ಯಾರು ಬರ್ತಾರೆ ಎಂದು ನಿಖರ ಮಾಹಿತಿ ಇಲ್ಲಾ, ಕಾದು ನೋಡೋಣ, ಯಾರ್ಯಾರು ಬರ್ತಾರೆ ಅಂತಾ, ಚರ್ಚೆ ಅಂತೂ ಆಗುತ್ತಿದೆ.
3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಹೇಳಿದರು. ಇನ್ನೂ ರಾಜ್ಯ ಸರ್ಕಾರ ದಿವಾಳಿ ಎಂದಿದ್ದ ಪ್ರಹ್ಲಾದ್ ಜೋಶಿಗೆ ಕೇಂದ್ರ ಸರ್ಕಾರ ದಿವಾಳಿ ಆಗುತ್ತಿದೆಯೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ತಿರುಗೇಟು ನೀಡಿದ್ದಾರೆ. ಮೋದಿ ಬಂದ ಮೇಲೆ ಎಷ್ಟು ಲಕ್ಷ ಕೋಟಿ ಸಾಲ ಮಾಡಿದ್ದಾರೆ ಅದನ್ನು ಹೇಳಲಿ ಎಂದು ಹೇಳಿದ್ದಾರೆ.