ಸಿನಿಮಾ ರಂಗದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿರುವ ಹಿರಿಯ ನಟಿ ಹೇಮಾ ಚೌಧರಿಹಾಗೂ ಎಂ.ಎಸ್ ನರಸಿಂಹಮೂರ್ತಿ ಅವರಿಗೆ ನ.1ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಹಿರಿಯ ನಟಿ ಹೇಮಾ ಚೌಧರಿ, ಎಂ.ಎಸ್ ನರಸಿಂಹಮೂರ್ತಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಪುರಸ್ಕೃತರಿಗೆ ಶಾಲಿನ ಜೊತೆ ಹೂವಿನ ಹಾರ ಹಾಕಿ, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.
ಖ್ಯಾತ ಹಿರಿಯ ನಟಿ ಹೇಮಾ ಚೌಧರಿ ಬಿಗ್ ಸ್ಕ್ರೀನ್ ಜೊತೆಗೆ ಸ್ಮಾಲ್ ಸ್ಕ್ರೀನ್ ನಲ್ಲೂ ತಮ್ಮನ್ನು ತಾವು ತೊಡಗಿಕೊಂಡಿದ್ದರು. ಅವರು ತೆಲುಗಿನ ಸ್ಟಾರ್ ನಟ ಎನ್ಟಿ ರಾಮರಾವ್, ವರನಟ ರಾಜ್ಕುಮಾರ್, ವಿಷ್ಣುವರ್ಧನ್, ಅನಂತ್ ನಾಗ್, ಶಂಕರ್ ನಾಗ್ ಸೇರಿದಂತೆ ಅನೇಕರ ಜೊತೆ ತೆರೆಹಂಚಿಕೊಂಡಿದ್ದಾರೆ. 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.
ಇನ್ನೂ ನಟ, ಬರಹಗಾರರಾಗಿ ಗುರುತಿಸಿಕೊಂಡಿರುವ ಎಂ.ಎಸ್ ನರಸಿಂಹಮೂರ್ತಿ ಅವರು ಸಿಲ್ಲಿ ಲಲ್ಲಿ, ಪಾಪ ಪಾಂಡು ಸೀರಿಯಲ್ಗೆ 12 ಸಾವಿರ ಎಪಿಸೋಡ್ಗಳನ್ನು ಬರೆದಿದ್ದರು.