ಹಾಸನ:- ವರ್ಷಕ್ಕೆ ಒಂದು ಬಾರಿ ಮಾತ್ರ ಬಾಗಿಲು ತೆರೆಯುವ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನವಾಗಿದೆ.
ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನವಾಗಿದ್ದು ಸಂಪ್ರಾಯದಂತೆ ನವೆಂಬರ್ 03 ರಂದು ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ.
ಅಕ್ಟೋಬರ್ 24 ರಂದು ಮಧ್ಯಾಹ್ನ 12:15 ಗಂಟೆಗೆ ದೇವಾಲಯದ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿತ್ತು. ಅಂದಿನಿಂದ ಇವತ್ತಿನವರೆಗೆ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಬಂದು ಹಾಸನಾಂಬೆಯ ದರ್ಶನ ಪಡೆದುಕೊಳ್ಳುತ್ತಿದ್ದಾರೆ.
ಶುಕ್ರವಾರದಿಂದ ವಿವಿಐಪಿ ಹಾಗೂ ವಿಐಪಿ ಪಾಸ್ಗಳು ರದ್ದು ಮಾಡಲಾಗಿದೆ. ರವಿವಾರ ನಸುಕಿನ ಜಾವ 4 ಗಂಟೆವರೆಗೂ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಭಕ್ತಾದಿಗಳ ದಂಡೇ ಹರಿದು ಬರುತ್ತಿದೆ.