ಆನೇಕಲ್:- ಜಗಳ ಬಿಡಿಸಲು ಹೋದವರ ಮೇಲೆ ಬಂದೂಕಿನಿಂದ ಫೈರಿಂಗ್ ನಡೆದಿರುವ ಘಟನೆ ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ಜರುಗಿದೆ.
ಡಬಲ್ ಬ್ಯಾರಲ್ ಬಂದೂಕಿನಿಂದ ಫೈರಿಂಗ್ ನಡೆದಿದೆ. ಜಗಳ ಬಿಡಿಸಲು ಹೋಗಿದ್ದ ಸಂಪಗಿಗೆ ಗುಂಡೇಟು ಬಿದ್ದಿದ್ದು, ಚಂದ್ರಶೇಖರ್ ಬಂದೂಕಿನಿಂದ ಗುಂಡು ಹಾರಿಸಿದ ಆರೋಪಿ ಎಂದು ಹೇಳಲಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸಿಡಿ ಹೊಸಕೋಟೆ ಗ್ರಾಮದಲ್ಲಿ ಘಟನೆ ಜರುಗಿದೆ.
ಚಂದ್ರಶೇಖರ್ ಹಾಗೂ ಶ್ರೀನಿವಾಸ್ ಸಿಡಿ ಹೊಸಕೋಟೆ ಗ್ರಾಮದ ಮುನಿರಾಜು ವೆಂಬು ಅವರ ಮಗನಾಗಿದ್ದು ತಂದೆ ಮಕ್ಕಳು ಇಬ್ಬರು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಳ್ಳುತ್ತಿದ್ದರು. ಇದೇ ಸಮಯದಲ್ಲಿ ಹಲ್ಲೆ ಮಾಡುತ್ತಿದ್ದಾಗ ಬಿಡಿಸಲು ಮುನಿರಾಜು ಅವರ ಅಣ್ಣನಾದ ಸಂಪಂಗಿ ಹಾಗೂ ಪತ್ನಿ ಬಂದಿದ್ದಾರೆ.
ಬಂದು ಸಮಾಧಾನ ಮಾಡಲು ಬಂದಿದ್ದ ಚಂದ್ರಶೇಖರ್ ಸಂಪಂಗಿಯ ಮೇಲೆ ಫೈರಿಂಗ್ ಮಾಡಿದ್ದಾನೆ. ಸಂಪಂಗಿಯ ಹೊಟ್ಟೆ ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯವಾಗಿದ್ದು ಆನೇಕಲ್ನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.