ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಹನಿ ನೀರಾವರಿಗಾಗಿ ಸಹಾಯಧನ ಪಡೆದುಕೊಳ್ಳಲು ಯೋಜನೆ ರೂಪಿಸಲಾಗಿದೆ.
ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ
ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆಯಡಿ ಸಹಾಯಧನ ಸೌಲಭ್ಯ ದೊರೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಸ್.ಕೇಶವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.=
ಈ ಯೋಜನೆಯಡಿ ಫಲಾನುಭವಿಗೆ ಗರಿಷ್ಠ 2 ಎಕರೆ ಪ್ರದೇಶದ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90ರಷ್ಟು ಸಹಾಯಧನ ದೊರೆಯುತ್ತದೆ. ಆಸಕ್ತರು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಿ ಅರ್ಜಿ ಸಲ್ಲಿಸಲು ಕೋರಿದೆ
ಹನಿ ನಿರಾವರಿ ಸಹಾಯಧನ ಪಡೆಯಲು ಅರ್ಜಿ ಅಲ್ಲಿಸಿ
ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತಿದ್ದು ಈ ಯೋಜನೆಯಡಿ ರೈತರಿಗೆ ಸಹಾಯ ಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನಲ್ಲಿ ಕೃಷಿ ಸಂಚಯಿನಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಶೇ 90 ಸಹಾಯಧನದಲ್ಲಿ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದ್ದು, 5 ಎಕರೆವರೆಗೂ ಹನಿ ನೀರಾವರಿ ವಿಸ್ತರಿಸಿಕೊಳ್ಳಬಹುದು.
ಆಸಕ್ತ ರೈತರು ಡಿ. 31 ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ತಾಲ್ಲೂಕಿನ ಹೊಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಮಾನದಂಡವೇನು? : ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆಯಲು ರೈತರು ಕೆಲವೊಂದು ಮಾನದಂಡಗಳನ್ನು ಹೊಂದಿರಬೇಕು. ತಮ್ಮದೇ ಹೆಸರಿನಲ್ಲಿ ರೈತರು ಜಮೀನನ್ನು ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜಾತಿಯ ರೈತರು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು.
ರೈತರು ಅರ್ಜಿಯನ್ನು ಸಲ್ಲಿಸಿ ಅದು ಅನುಮೋದನೆಯಾದ ನಂತರ ರೈತರು ತೋಟಗಾರಿಕೆ ಇಲಾಖೆ ವತಿಯಿಂದ ಅನುಮೋದನೆಗೊಂಡ ಕಂಪನಿ/ಡೀಲರ್ ಅವರಿಂದ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬಹುದು.