ಬೆಂಗಳೂರು: ಅಶೋಕ್ ಕೇಳೋದು ದೊಡ್ಡದಾ? ನಾವು ರಾಜೀನಾಮೆ ಕೊಡಿಸೋದು ದೊಡ್ಡದಾ? ಎಂದು ಆರ್.ಅಶೋಕ್ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಸಚಿವರ ರಾಜೀನಾಮೆಗೆ ವಿಪಕ್ಷ ನಾಯಕರ ಆರ್.ಅಶೋಕ್ ಒತ್ತಾಯ ವಿಚಾರವಾಗಿ ಪಾಪ ಅಶೋಕ್ಗೆ ರಾಜೀನಾಮೆ ಕೊಡಿಸೋಣ.
ಅಶೋಕ್ ಕೇಳೋದು ದೊಡ್ಡದಾ? ನಾವು ರಾಜೀನಾಮೆ ಕೊಡಿಸೋದು ದೊಡ್ಡದಾ? ಕೊಡೋಣ ಎಂದು ತಿರುಗೇಟು ಕೊಟ್ಟಿದ್ದಾರೆಸಚಿವ ತಿಮ್ಮಾಪುರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಬೇಕಾದರೂ ರಾಜ್ಯಪಾಲರಿಗೆ ಪತ್ರ ಬರೆದು ತನಿಖೆ ಮಾಡಿ ಎಂದು ದೂರು ಕೊಡಬಹುದು. ಹಿಂದೆಯೂ ನೂರಾರು ದೂರುಗಳು ಬಂದಿತ್ತು. ಈಗ ಸ್ವಲ್ಪ ವಿಶೇಷವಾಗಿ ಹೊರಟಿದ್ದಾರೆ. ಇದೆಲ್ಲ ಬರೀ ರಾಜಕೀಯದ ಬಣ್ಣ ಅಷ್ಟೆ ಎಂದು ಕಿಡಿಕಾರಿದರು